ಪಾದಚಾರಿ ಮೇಲ್ಸೇತುವೆ ದುಂದುವೆಚ್ಚದ ಯೋಜನೆ ಎಂದ ಬಿಜೆಪಿ ಮುಖಂಡ ಲೋಕೇಶ್ವರ
ತಿಪಟೂರು: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಿರ್ಮಿಸಲಾಗುತ್ತಿರುವ ₹2 ಕೋಟಿ ವೆಚ್ಚದ ಪಾದಚಾರಿ ಮೇಲ್ಸೇತುವೆ ಸಾರ್ವಜನಿಕರಿಗೆ ಹೆಚ್ಚು ಪ್ರಯೋಜನಕಾರಿಯಾಗದೆ, ದುಂದು ವೆಚ್ಚದ ಯೋಜನೆ ಆಗಿದೆ ಎಂದು ಬಿಜೆಪಿ ಮುಖಂಡ ಲೋಕೇಶ್ವರ ತಿಳಿಸಿದ್ದಾರೆ.ನಗರದ ರುದ್ರಭೂಮಿ ಅಭಿವೃದ್ಧಿಗೆ ಮೂರು ವರ್ಷಗಳಿಂದ ಸಂಸದರ ಸ್ಥಳೀಯ ಪ್ರದೇಶಾಭಿವ

ತಿಪಟೂರು: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಿರ್ಮಿಸಲಾಗುತ್ತಿರುವ ₹2 ಕೋಟಿ ವೆಚ್ಚದ ಪಾದಚಾರಿ ಮೇಲ್ಸೇತುವೆ ಸಾರ್ವಜನಿಕರಿಗೆ ಹೆಚ್ಚು ಪ್ರಯೋಜನಕಾರಿಯಾಗದೆ, ದುಂದು ವೆಚ್ಚದ ಯೋಜನೆ ಆಗಿದೆ ಎಂದು ಬಿಜೆಪಿ ಮುಖಂಡ ಲೋಕೇಶ್ವರ ತಿಳಿಸಿದ್ದಾರೆ.ನಗರದ ರುದ್ರಭೂಮಿ ಅಭಿವೃದ್ಧಿಗೆ ಮೂರು ವರ್ಷಗಳಿಂದ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಅನುದಾನ ಕೋರಲಾಗಿದ್ದರೂ ಇದೂವರೆಗೆ ಯಾವುದೇ ನೆರವು ದೊರೆತಿಲ್ಲ ಎಂದು ಅವರು ಆರೋಪಿಸಿದ್ದಾರೆ.ಅಗತ್ಯತೆ ಮತ್ತು ಸ್ಥಳೀಯ ಪರಿಸ್ಥಿತಿಯನ್ನು ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳು ಯೋಜನೆಯನ್ನು ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260715-17-1675785308
Read the complete story at Prajavani