ಹೊರ್ಮುಜ್ ಮೂಲಕ ಸಾಗುವ ಸರಕು ಸಾಗಣೆ ಹಡಗುಗಳಿಗೆ ಶುಲ್ಕ: ನಿರ್ಧಾರ ಹಿಂಪಡೆದ ಟ್ರಂಪ್
ದುಬೈ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊರ್ಮುಜ್ ಜಲಸಂಧಿಯ ಮೂಲಕ ಸಾಗುವ ಸರಕು ಸಾಗಣೆ ಹಡಗುಗಳ ಮೇಲೆ ಶೇ 20ರಷ್ಟು ಶುಲ್ಕ ವಿಧಿಸುವ ತಮ್ಮ ನಿರ್ಧಾರವನ್ನು ಒಂದೇ ದಿನದಲ್ಲಿ ಹಿಂಪಡೆದಿದ್ದಾರೆ.‘ಪಶ್ಚಿಮ ಏಷ್ಯಾ ರಾಷ್ಟ್ರಗಳ ನಾಯಕರೊಂದಿಗೆ ರಚನಾತ್ಮಕ ಮಾತುಕತೆಯ ಬಳಿಕ ಶುಲ್ಕ ವಿಧಿಸುವ ನಿರ್ಧಾರವನ್ನು ವಾಪಸ್ ಪಡೆದುಕೊಂಡಿದ್ದೇನೆ. ಅದಕ್ಕೆ ಬದಲಾಗಿ ಕೊಲ್ಲಿ

ದುಬೈ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊರ್ಮುಜ್ ಜಲಸಂಧಿಯ ಮೂಲಕ ಸಾಗುವ ಸರಕು ಸಾಗಣೆ ಹಡಗುಗಳ ಮೇಲೆ ಶೇ 20ರಷ್ಟು ಶುಲ್ಕ ವಿಧಿಸುವ ತಮ್ಮ ನಿರ್ಧಾರವನ್ನು ಒಂದೇ ದಿನದಲ್ಲಿ ಹಿಂಪಡೆದಿದ್ದಾರೆ.‘ಪಶ್ಚಿಮ ಏಷ್ಯಾ ರಾಷ್ಟ್ರಗಳ ನಾಯಕರೊಂದಿಗೆ ರಚನಾತ್ಮಕ ಮಾತುಕತೆಯ ಬಳಿಕ ಶುಲ್ಕ ವಿಧಿಸುವ ನಿರ್ಧಾರವನ್ನು ವಾಪಸ್ ಪಡೆದುಕೊಂಡಿದ್ದೇನೆ. ಅದಕ್ಕೆ ಬದಲಾಗಿ ಕೊಲ್ಲಿ ರಾಷ್ಟ್ರಗಳು ಅಮೆರಿಕದ ಜತೆ ವ್ಯಾಪಾರ ಮತ್ತು ಹೂಡಿಕೆ ಒಪ್ಪಂದವನ್ನು ಮಾಡಿಕೊಳ್ಳಲಿವೆ’ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ತಿಳಿಸಿದ್ದಾರೆ.ಹೂಡಿಕೆಗಳು ‘ಬೃಹತ್ ಪ್ರಮಾಣದಲ್ಲಿರಲಿವೆ’ ಎಂದು ಹೇಳಿರುವ ಅವರು ಹೆಚ್ಚಿನ ವಿವರಗಳನ್ನು ನೀಡಿಲ್ಲ. ಕಳೆದ ವರ್ಷ ಕೊಲ್ಲಿ ರಾಷ್ಟ್ರಗಳ ಭೇಟಿ ಸಂದರ್ಭದಲ್ಲಿ ಟ್ರಂಪ್ ಅವರು ಹಲವು ಒಪ್ಪಂದ ಮಾಡಿಕೊಂಡಿದ್ದರು. ಅವರು ಅದೇ ಒಪ್ಪಂದಗಳನ್ನು ಉಲ್ಲೇಖಿಸಿದ್ದಾರೆಯೇ ಅಥವಾ ಹೊಸ ಒಪ್ಪಂದದ ಬಗ್ಗೆ ಮಾತನಾಡಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ.
Read the complete story at Prajavani