ಸಚಿವ ಸ್ಥಾನಕ್ಕೆ ಕಸರತ್ತು ಶುರು
ನವದೆಹಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಸುಮಾರು ಒಂದೂವರೆ ತಿಂಗಳ ಬಳಿಕ ಸಂಪುಟ ವಿಸ್ತರಣೆಯ ಕಾಲ ಸನ್ನಿಹಿತವಾಗಿದ್ದು, ನಾಯಕರು ಹಾಗೂ ಆಕಾಂಕ್ಷಿ ಶಾಸಕರು ಇಲ್ಲಿಗೆ ದೌಡಾಯಿಸಿದ್ದಾರೆ.ಕಾಂಗ್ರೆಸ್ ಹೈಕಮಾಂಡ್ ನಿರ್ದೇಶ ನದ ಮೇರೆಗೆ ಶಿವಕುಮಾರ್, ಕಾಂಗ್ರೆಸ್ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ

ನವದೆಹಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಸುಮಾರು ಒಂದೂವರೆ ತಿಂಗಳ ಬಳಿಕ ಸಂಪುಟ ವಿಸ್ತರಣೆಯ ಕಾಲ ಸನ್ನಿಹಿತವಾಗಿದ್ದು, ನಾಯಕರು ಹಾಗೂ ಆಕಾಂಕ್ಷಿ ಶಾಸಕರು ಇಲ್ಲಿಗೆ ದೌಡಾಯಿಸಿದ್ದಾರೆ.ಕಾಂಗ್ರೆಸ್ ಹೈಕಮಾಂಡ್ ನಿರ್ದೇಶ ನದ ಮೇರೆಗೆ ಶಿವಕುಮಾರ್, ಕಾಂಗ್ರೆಸ್ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಮತ್ತಿತರ ನಾಯಕರು ಬುಧವಾರ ರಾತ್ರಿ ರಾಷ್ಟ್ರ ರಾಜಧಾನಿಗೆ ಧಾವಿಸಿದ್ದಾರೆ. ಇನ್ನೊಂದೆಡೆ, ಗುರುವಾರ ಬೆಂಗಳೂರಿನಲ್ಲಿ ನಿಗದಿ ಯಾಗಿದ್ದ ಸಚಿವ ಸಂಪುಟ ಸಭೆ ದಿಢೀರ್ ಮುಂದೂಡಿಕೆಯಾಗಿದೆ. ವರಿಷ್ಠರು ಹಾಗೂ ರಾಜ್ಯ ನಾಯಕರು ಗುರುವಾರ ವಿಡೀ ಕಸರತ್ತು ನಡೆಸಿ ಸಂಭಾವ್ಯರ ಪಟ್ಟಿಗೆ ಅಂತಿಮ ರೂಪ ನೀಡುವ ಸಾಧ್ಯತೆ ಇದೆ.ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿಡೆಹ್ರಾಡೂನ್ನಲ್ಲಿ ಶುಕ್ರವಾರ ನಡೆಯಲಿ ರುವ ರ್ಯಾಲಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಅದಕ್ಕೂ ಮುನ್ನವೇ ರಾಜ್ಯದ ಸಂಪುಟ ವಿಸ್ತರಣೆಯ ಅಂತಿಮ ಚಿತ್ರಣ ಹೊರಬೀಳುವ ಸಂಭವ ಇದೆ. ರಾಜ್ಯ ನಾಯಕರು ಸಂಭಾವ್ಯರ ಪಟ್ಟಿಯೊಂದಿಗೆ ಕೆಲ ದಿನಗಳಿಂದ ಸಜ್ಜಾಗಿ ಕುಳಿತಿದ್ದರು. ರಾಹುಲ್ ವಿದೇಶ ಪ್ರವಾಸ ದಲ್ಲಿದ್ದ ಕಾರಣ, ರಾಜ್ಯ ನಾಯಕರಿಗೆ ಹೈಕಮಾಂಡ್ನಿಂದ ಬುಲಾವ್ ಬಂದಿರಲಿಲ್ಲ. ಸಂಪುಟ ಸೇರಲು ಹರಿಪ್ರಸಾದ್ ಅಣಿಕೆಪಿಸಿಸಿ ಅಧ್ಯಕ್ಷರಾದ ಹರಿಪ್ರಸಾದ್ ಅವರು ಸಂಪುಟಕ್ಕೆ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚಿಸಿದ್ದಾರೆ.‘ಒಬ್ಬರಿಗೆ ಒಂದೇ ಹುದ್ದೆ’ ಎಂಬ ಮಾನದಂಡ ಅನುಸರಿಸಿ ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಿಸಿತ್ತು. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಸಚಿವ ಸ್ಥಾನದ ಜತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೂ ಆಗಿದ್ದರು. ಅವರ ಒತ್ತಡಕ್ಕೆ ಹೈಕಮಾಂಡ್ ಮಣೆ ಹಾಕಿರಲಿಲ್ಲ.ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಚನೆಯ ವೇಳೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟುಹಿಡಿದಿದ್ದ ಡಿ.ಕೆ.ಶಿವಕುಮಾರ್, ಆ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನೂ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಇದೇ ಮಾನದಂಡವನ್ನು ಹರಿಪ್ರಸಾದ್ ವಿಷಯದಲ್ಲಿಯೂ ಹೈಕಮಾಂಡ್ ಅನುಸರಿಸಬೇಕು ಎಂದು ಸಿದ್ದರಾಮಯ್ಯ ಒತ್ತಡ ಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ.