ದಾವಣಗೆರೆ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ: ನಗರದ ದೇವರಾಜ ಅರಸು ಬಡಾವಣೆ ಹಾಗೂ ಪಿ.ಜೆ. ಬಡಾವಣೆಯಲ್ಲಿರುವ ಜಿಲ್ಲಾ ನ್ಯಾಯಾಲಯ ಕಟ್ಟಡಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರ ಇ–ಮೇಲ್ ವಿಳಾಸಕ್ಕೆ ಗುರುವಾರ ಸಂಜೆ ಬಂದಿರುವ ಸಂದೇಶದಲ್ಲಿ ಬಾಂಬ್ ಬೆದರಿಕೆಯ ಮಾಹಿತಿ ಲಭ್ಯವಾಗಿದೆ. ಇದನ್ನು ಗಮನಿಸಿದ ನ್ಯಾಯಾಲಯದ ಅಧಿಕಾರಿಗ
ದಾವಣಗೆರೆ: ನಗರದ ದೇವರಾಜ ಅರಸು ಬಡಾವಣೆ ಹಾಗೂ ಪಿ.ಜೆ. ಬಡಾವಣೆಯಲ್ಲಿರುವ ಜಿಲ್ಲಾ ನ್ಯಾಯಾಲಯ ಕಟ್ಟಡಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರ ಇ–ಮೇಲ್ ವಿಳಾಸಕ್ಕೆ ಗುರುವಾರ ಸಂಜೆ ಬಂದಿರುವ ಸಂದೇಶದಲ್ಲಿ ಬಾಂಬ್ ಬೆದರಿಕೆಯ ಮಾಹಿತಿ ಲಭ್ಯವಾಗಿದೆ. ಇದನ್ನು ಗಮನಿಸಿದ ನ್ಯಾಯಾಲಯದ ಅಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ರವಾನಿಸಿದ್ದರು. ಈ ವೇಳೆ ನ್ಯಾಯಾಲಯದ ಆವರಣದಲ್ಲಿ ಜನದಟ್ಟಣೆ ವಿರಳವಾಗಿತ್ತು.ಸ್ಥಳಕ್ಕೆ ಧಾವಿಸಿದ ಬಾಂಬ್ ಪತ್ತೆ ಹಾಗೂ ಶ್ವಾನ ದಳದ ತಂಡಗಳು ರಾತ್ರಿ 9 ಗಂಟೆಯವರೆಗೆ ಪರಿಶೀಲನೆ ನಡೆಸಿದವು. ಎರಡು ಕೋರ್ಟ್ ಆವರಣಗಳಲ್ಲಿ ಯಾವುದೇ ಸ್ಪೋಟಕ ಪತ್ತೆಯಾಗಿಲ್ಲ. ‘ಶುಕ್ರವಾರ ಬೆಳಿಗ್ಗೆ ಬಾಂಬ್ ಸ್ಫೋಟಗೊಳ್ಳಲಿವೆ’ ಎಂಬ ಮಾಹಿತಿ ಇ–ಮೇಲ್ನಲ್ಲಿ ಇರುವುದರಿಂದ ನ್ಯಾಯಾಲಯದ ಆವರಣದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.ನ್ಯಾಯಾಲಯಕ್ಕೆ ಕೆಲ ದಿನಗಳ ಹಿಂದೆಯಷ್ಟೇ ಬಾಂಬ್ ಬೆದರಿಕೆ ಬಂದಿತ್ತು. ಇತ್ತೀಚಿನ ದಿನಗಳಲ್ಲಿ ಮೂರನೇ ಬಾರಿಗೆ ಇಂತಹ ಬೆದರಿಕೆ ಬಂದಿದೆ.
Read the complete story at Prajavani