ನಾಗರಮುನ್ನೋಳಿ ಹೋಬಳಿ ಏತ ನೀರಾವರಿಗೆ ಆದ್ಯತೆ; ಸಂಸದೆ ಪ್ರಿಯಾಂಕಾ ಜಾರಕಿಹೊಳಿ
ಚಿಕ್ಕೋಡಿ: ನಾಗರಮುನ್ನೋಳಿ ಹೋಬಳಿ ವ್ಯಾಪ್ತಿಯ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ’ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಜೈನಾಪೂರ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನಾಗರಿಕ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಮಹಾವೀರ ಮೋಹಿತೆ ಮಾತನಾಡಿ, ‘20 ವರ್ಷಗಳ ಇತಿಹಾಸದ

ಚಿಕ್ಕೋಡಿ: ನಾಗರಮುನ್ನೋಳಿ ಹೋಬಳಿ ವ್ಯಾಪ್ತಿಯ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ’ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಜೈನಾಪೂರ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನಾಗರಿಕ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಮಹಾವೀರ ಮೋಹಿತೆ ಮಾತನಾಡಿ, ‘20 ವರ್ಷಗಳ ಇತಿಹಾಸದಲ್ಲಿ ಆಗದ ಕರಗಾಂವ ಏತ ನೀರಾವರಿ ಯೋಜನೆ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ ಮೂರು ತಿಂಗಳಲ್ಲಿ ಕಾರ್ಯರೂಪಕ್ಕೆ ಬರಲು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕಾರಣರಾಗಿದ್ದಾರೆ’ ಎಂದು ಹೇಳಿದರು. ನಾಗರಮುನ್ನೋಳಿ ಹೋಬಳಿ ವ್ಯಾಪ್ತಿಯ ವಿವಿಧ ಸಮಸ್ಯೆಗಳ ನಿವಾರಣೆ ಮಾಡುವಂತೆ ಒತ್ತಾಯಿಸಿದ ಮುಖಂಡರು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು. ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಒಬಿಸಿ ಘಟಕದ ಅಧ್ಯಕ್ಷ ಅರ್ಜುನ ನಾಯಿಕವಾಡಿ, ರುದ್ರಪ್ಪ ಸಂಗಪ್ಪಗೋಳ, ಸುರೇಶ ಘರಬುಡೆ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಿರ್ಮಲಾ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರಗೌಡ ಪಾಟೀಲ ಇದ್ದರು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260716-21-300881358