ದೇವದುರ್ಗದಲ್ಲಿ ಬಾಲ ವಿಕಾಸ ನಡಿಗೆ ಪಾಲಕರ ಕಡೆಗೆ ತರಬೇತಿ ಕಾರ್ಯಕ್ರಮ
ದೇವದುರ್ಗ: ಜಿಲ್ಲಾಡಳಿತ, ತಾಲ್ಲೂಕು ಆಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಬಾಲ ವಿಕಾಸ ನಡಿಗೆ ಪಾಲಕರ ಕಡೆಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.ಮಕ್ಕಳ ಅಭಿವೃದ್ಧಿಯಲ್ಲಿ ಇಲಾಖೆ ಹಾಗೂ ಪಾಲಕರ ಜವಾಬ್ದಾರಿ ಕುರಿತಂತೆ ಮಕ್
ದೇವದುರ್ಗ: ಜಿಲ್ಲಾಡಳಿತ, ತಾಲ್ಲೂಕು ಆಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಬಾಲ ವಿಕಾಸ ನಡಿಗೆ ಪಾಲಕರ ಕಡೆಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.ಮಕ್ಕಳ ಅಭಿವೃದ್ಧಿಯಲ್ಲಿ ಇಲಾಖೆ ಹಾಗೂ ಪಾಲಕರ ಜವಾಬ್ದಾರಿ ಕುರಿತಂತೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಇರುವ ವಿವಿಧ ಯೋಜನೆ, ಹಕ್ಕುಗಳು, ಕಾನೂನು ಮತ್ತು ಅನಿಷ್ಠ ಪದ್ಧತಿಗಳಾದ ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ಕುರಿತಂತೆ ತರಬೇತಿದಾರರು ಸಭೆಯಲ್ಲಿ ಭಾಗವಹಿಸಿದ್ದ ಮೇಲ್ವಿಚಾರಕರಿಗೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಪರಿಣಾಮಕಾರಿ ಜಾರಿಯಲ್ಲಿ ಪಾಲಕರ ಸಹಕಾರ ಅಗತ್ಯತೆಯ ಬಗ್ಗೆ ತಿಳಿಸಿದರು.ಜಿಲ್ಲಾ ಬಾಲ ಭವನ ಸಂಯೋಜನಾಧಿಕಾರಿ ದೀಪಾ, ಸಿಡಿಪಿಒ ಮಹೇಶ ನಾಯಕ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸಂಯೋಜಕ ಮೋಹನ ಕುಮಾರ, ಜಿಲ್ಲಾ ಪೋಷಕ್ವ ಯೋಜನೆ ಸಂಯೋಜನಾಧಿಕಾರಿ ನಾಗರಾಜ, ತಾರಮ್ಮ, ಮಲ್ಟಿಟಾಸ್ಕ್ ಸಮಿತಿ ಶಾಂತ, ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಶರಣಮ್ಮ, ವಿವಿಧ ವಲಯ ಮೇಲ್ವಿಚಾರಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರಿದ್ದರು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260716-32-243858887