ಖರ್ಗೆ ಗೈರು ಹಿನ್ನೆಲೆ; ರಾಜ್ಯ ಸಂಪುಟ ವಿಸ್ತರಣೆ ಕುರಿತ ಸಭೆ ಮುಂದೂಡಿಕೆ
ನವದೆಹಲಿ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.ಚರ್ಚೆ ಬಳಿಕ, ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್
ನವದೆಹಲಿ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.ಚರ್ಚೆ ಬಳಿಕ, ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ರಾಹುಲ್ ಮನೆಯಿಂದ ನಿರ್ಗಮಿಸಿದ್ದಾರೆ.ಮಗನ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ತೆರಳಿದ್ದು, ಸಭೆಯಲ್ಲಿ ಭಾಗಿಯಾಗಿಲ್ಲ. ಕೆ.ಸಿ. ವೇಣುಗೋಪಾಲ್ ಸಹ ಅನಾರೋಗ್ಯದ ಕಾರಣದಿಂದ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿದೆ. ಖರ್ಗೆ ಅವರು ವಾಪಸ್ ಬಂದ ಬಳಿಕ ಮತ್ತೆ ಸಭೆ ನಡೆಯಲಿದೆ. ರಾಹುಲ್ ಗಾಂಧಿ ಜೊತೆಗೆ ರಾಜ್ಯದ ನಾಯಕರು ಪ್ರಾಥಮಿಕ ಹಂತದ ಚರ್ಚೆ ನಡೆಸಿದ್ದಾರೆ. ಖರ್ಗೆ ಬಂದ ಬಳಿಕ ವಿಸ್ತೃತ ಚರ್ಚೆ ಮಾಡುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ. ಅಗತ್ಯ ಬಿದ್ದರೆ ವಾಪಸ್ ಕರೆಯುವುದಾಗಿಯೂ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.