ಉಪವಾಸನಿರತ ವಾಂಗ್ಚೂಕ್ ಭೇಟಿಯಾದ ಕೇಜ್ರಿವಾಲ್: ಪ್ರಧಾನ್ ರಾಜೀನಾಮೆಗೆ ಒತ್ತಾಯ
ನವದೆಹಲಿ: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಜಂತರ್ ಮಂತರ್ನಲ್ಲಿ ಉಪವಾಸ ನಿರತ ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚೂಕ್ ಅವರನ್ನು ಭೇಟಿಯಾಗಿದ್ದಾರೆ. ನೀಟ್ ಸೇರಿದಂತೆ ಪ್ರಮುಖ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮದ ವಿರುದ್ಧದ ವಾಂಗ್ಚೂಕ್ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ಅವರು, ಕೇಂದ್ರದ ಶಿಕ್ಷಣ ಸಚಿವ ಧ

ನವದೆಹಲಿ: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಜಂತರ್ ಮಂತರ್ನಲ್ಲಿ ಉಪವಾಸ ನಿರತ ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚೂಕ್ ಅವರನ್ನು ಭೇಟಿಯಾಗಿದ್ದಾರೆ. ನೀಟ್ ಸೇರಿದಂತೆ ಪ್ರಮುಖ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮದ ವಿರುದ್ಧದ ವಾಂಗ್ಚೂಕ್ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ಅವರು, ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿದ್ಧಾರೆ. ಕೇಂದ್ರ ಸರ್ಕಾರವು ಯುವಕರು, ವಿದ್ಯಾರ್ಥಿಗಳು ಮತ್ತು ವಾಂಗ್ಚೂಕ್ ಮಾತುಗಳನ್ನು ಆಲಿಸಬೇಕು ಎಂದ ಅವರು, ಪದೇ ಪದೇ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತಾದ ಅವರ ಕಳವಳಗಳನ್ನು ಕಡೆಗಣಿಸಬಾರದು ಎಂದಿದ್ದಾರೆ. ‘ಪ್ರತಿ ವರ್ಷ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದ್ದು, ಯುವಕರು ಬೆಲೆ ತೆರಬೇಕಾಗಿದೆ. ವಿದ್ಯಾರ್ಥಿಗಳು, ಯುವಕರು ಮತ್ತು ವಾಂಗ್ಚೂಕ್ ಅವರ ಮಾತುಗಳನ್ನು ಆಲಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತೇನೆ’ ಎಂದಿದ್ದಾರೆ.ಪ್ರಶ್ನೆ ಪತ್ರಿಕೆ ಸೋರಿಕೆ ವ್ಯಾಪಕವಾಗುತ್ತಿದ್ದು, ಪರೀಕ್ಷಾ ವ್ಯವಸ್ಥೆಯು ನಾಶವಾಗಿದೆ. ಅದರಲ್ಲೂ ಕಳೆದ 5 ವರ್ಷಗಳಲ್ಲಿ ತೀವ್ರ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ.ವ್ಯವಸ್ಥೆ ಮೇಲೆ ವಿದ್ಯಾರ್ಥಿಗಳು ವಿಶ್ವಾಸ ಕಳೆದುಕೊಂಡಿದ್ದು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಸುಮಾರು 20 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದರಲ್ಲಿ ಕೆಲವರು ಕೆಲವರು ಮೃತಪಟ್ಟಿದ್ದಾರೆ. ಇಂತಹ ಘಟನೆಗಳ ಬಳಿಕವೂ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಸಿಬಿಎಸ್ಇ ಮೌಲ್ಯಮಾಪನ ವ್ಯವಸ್ಥೆ ಅಕ್ರಮ ಸುಳಿದಾಡುತ್ತಲೇ ಇದೆ ಎಂದಿದ್ದಾರೆ.ಇದೇ ವೇಳೆ, ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿದ ಕೇಜ್ರಿವಾಲ್, ವಾಂಗ್ಚೂಕ್ ಅವರನ್ನು ಶಿಕ್ಷಣ ಸಚಿವರನ್ನಾಗಿ ನೇಮಕ ಮಾಡಬೇಕು ಎಂದಿದ್ದಾರೆ.ಜುಲೈ 20ರಂದು ಸಂಸತ್ತಿನವರೆಗೆ ಪಾದಯಾತ್ರೆಗೆ ಕರೆ ನೀಡಿರುವ ಕಾಕ್ರೋಚ್ ಜನತಾ ಪಾರ್ಟಿಯ ಹೋರಾಟಕ್ಕೆ ಅಧಿಕ ಜನಸಂಖ್ಯೆಯಲ್ಲಿ ಕೈಜೋಡಿಸುವಂತೆ ಕರೆ ನೀಡಿದ್ದಾರೆ.ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿಯು ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಅದಕ್ಕೆ ಬೆಂಬಲವಾಗಿ ವಾಂಗ್ಚೂಕ್ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.