ಬೆಂಗ್ಳೂರಿನ ಹಲವೆಡೆ ಮಳೆ – ವಾಹನ ಸವಾರರ ಪರದಾಟ
ಬೆಂಗಳೂರು: ನಗರದ ಹಲವೆಡೆ ಮಳೆ ಸುರಿಯುತ್ತಿದೆ. ಮೈಸೂರು ರಸ್ತೆ, ಟೌನ್ ಹಾಲ್, ಚಾಮರಾಜಪೇಟೆ, ಕಾರ್ಪೋರೇಷನ್, ಕೆಆರ್ ಸರ್ಕಲ್, ಕೆಆರ್ ಮಾರ್ಕೆಟ್, ಮಲ್ಲೇಶ್ವರಂ, ಶೇಷಾದ್ರಿಪುರಂ ಸೇರಿದಂತೆ ಹಲವು ಕಡೆ ಮಳೆಯಾಗುತ್ತಿದೆ. ಮಳೆ ಹಿನ್ನೆಲೆ ವಾಹನ ಸವಾರರು ಪರದಾಡಿದ್ದಾರೆ. ಮುಂದಿನ ಮೂರ್ನಾಲ್ಕು ದಿನ ಬೆಂಗಳೂರಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡ

ಬೆಂಗಳೂರು: ನಗರದ ಹಲವೆಡೆ ಮಳೆ ಸುರಿಯುತ್ತಿದೆ. ಮೈಸೂರು ರಸ್ತೆ, ಟೌನ್ ಹಾಲ್, ಚಾಮರಾಜಪೇಟೆ, ಕಾರ್ಪೋರೇಷನ್, ಕೆಆರ್ ಸರ್ಕಲ್, ಕೆಆರ್ ಮಾರ್ಕೆಟ್, ಮಲ್ಲೇಶ್ವರಂ, ಶೇಷಾದ್ರಿಪುರಂ ಸೇರಿದಂತೆ ಹಲವು ಕಡೆ ಮಳೆಯಾಗುತ್ತಿದೆ. ಮಳೆ ಹಿನ್ನೆಲೆ ವಾಹನ ಸವಾರರು ಪರದಾಡಿದ್ದಾರೆ. ಮುಂದಿನ ಮೂರ್ನಾಲ್ಕು ದಿನ ಬೆಂಗಳೂರಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಇಂದಿನಿಂದ 3 ದಿನ ಮಳೆ ಸಾಧ್ಯತೆ – ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ರಾಜ್ಯದಲ್ಲಿ ಮುಂದಿನ 2 ದಿನ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಮಳೆಗಾಲದಲ್ಲಿ ಬಿಸಿಲು ಹೆಚ್ಚಾಗುತ್ತಿದ್ದು, ಬೇಸಿಗೆಯ ಅನುಭವವಾಗುತ್ತಿದೆ. ಇದರ ನಡುವೆ ಜುಲೈ 18, 19ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮಳೆ ಕೊರತೆ – ಸಚಿವಾಲಯದ ಎಲ್ಲಾ ಕಚೇರಿಗಳಲ್ಲಿ ನೀರು, ವಿದ್ಯುತ್ ಮಿತ ಬಳಕೆಗೆ ಸಿಎಸ್ ಆದೇಶ