ಆರ್ ಟಿಐ ಕಾಯ್ದೆಯಡಿ ಮಾಹಿತಿ ನೀಡದ ಎಇಇಗೆ ₹ 20 ಸಾವಿರ ದಂಡ
ಕಲಬುರಗಿ: ಮಾಹಿತಿ ನೀಡಲು ನಿರ್ಲಕ್ಷ್ಯ ತೋರಿ ಆಯೋಗದ ವಿಚಾರಣೆಗಳಿಗೆ ಗೈರಾದ ಪಂಚಾಯತ್ ರಾಜ್ ಎಂಜಿನಿಯರಿಂಗ್ ಕಾಳಗಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಜಕುಮಾರಗೆ ಎರಡು ಪ್ರತ್ಯೇಕ ಪ್ರಕರಣದಲ್ಲಿ ಕರ್ನಾಟಕ ಮಾಹಿತಿ ಆಯೋಗ ₹ 20 ಸಾವಿರ ದಂಡ ವಿಧಿಸಿದೆ.2021–22ರ ಕಾಳಗಿ ತಾಲ್ಲೂಕಿನ ಕೋಡ್ಲಿ ಗ್ರಾಮದ ಶ್ರೀನಾಥ ಎನ್ನುವವರು ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನ

ಕಲಬುರಗಿ: ಮಾಹಿತಿ ನೀಡಲು ನಿರ್ಲಕ್ಷ್ಯ ತೋರಿ ಆಯೋಗದ ವಿಚಾರಣೆಗಳಿಗೆ ಗೈರಾದ ಪಂಚಾಯತ್ ರಾಜ್ ಎಂಜಿನಿಯರಿಂಗ್ ಕಾಳಗಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಜಕುಮಾರಗೆ ಎರಡು ಪ್ರತ್ಯೇಕ ಪ್ರಕರಣದಲ್ಲಿ ಕರ್ನಾಟಕ ಮಾಹಿತಿ ಆಯೋಗ ₹ 20 ಸಾವಿರ ದಂಡ ವಿಧಿಸಿದೆ.2021–22ರ ಕಾಳಗಿ ತಾಲ್ಲೂಕಿನ ಕೋಡ್ಲಿ ಗ್ರಾಮದ ಶ್ರೀನಾಥ ಎನ್ನುವವರು ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆ ಯಾದ ಕೋಡ್ಲಿ ಗ್ರಾ.ಪಂ. ವ್ಯಾಪ್ತಿಯ ಗ್ರಾಮಗಳ ಪ್ರಾಥಮಿಕ ಶಾಲೆ ಚಾವಣಿ ದುರಸ್ತಿ ಕಾಮಗಾರಿಯ ಅನುದಾನದ ವಿವರ, ಬಿಲ್ ಪಾವತಿ ಸೇರಿ ಇದಕ್ಕೆ ಸಂಬಂಧಿಸಿದ ಮಾಹಿತಿ ನೀಡುವಂತೆ ಮಾಹಿತಿ ಹಕ್ಕು ಕಾಯ್ದೆಯಡಿ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು.ಮಾಹಿತಿಯನ್ನು ನಿಗದಿತ ಅವಧಿಯಲ್ಲಿ ನೀಡದ ಕಾರಣ ಶ್ರೀನಾಥ ಕೋಡ್ಲಿ ಪ್ರಥಮ ಮೇಲ್ಮನವಿ ಪ್ರಾಧಿಕಾರವಾದ ಪಂಚಾಯತ ರಾಜ್ ಕಲಬುರಗಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಆದರೂ ಮೇಲ್ಮನವಿದಾರರಿಗೆ ಕೋರಿದ ಮಾಹಿತಿ ದೊರೆಯದ ಕಾರಣ ಶ್ರೀನಾಥ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಎದುರು ದ್ವಿತೀಯ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಕಲಬುರಗಿ ಪೀಠದ ಆಯುಕ್ತ ಬಿ. ವೆಂಕಟ ಸಿಂಗ್ ಅವರು ಪ್ರತಿವಾದಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ನೋಟಿಸ್ಗೆ ಸ್ಪಂದಿಸದೇ ಗೈರಾಗಿದ್ದರಿದ ಹಾಗೂ ಕೋರಿದ ಮಾಹಿತಿ ನೀಡದೆ ನಿರ್ಲಕ್ಷ್ಯ ಮಾಡಿದ್ದರಿಂದ ಎಇಇ ರಾಜಕುಮಾರ ಅವರಿಗೆ ಎರಡು ಪ್ರತ್ಯೇಕ ಪ್ರಕರಣದಲ್ಲಿ ತಲಾ ₹ 10 ಸಾವಿರದಂತೆ ಒಟ್ಟು ₹ 20 ಸಾವಿರ ದಂಡ ವಿಧಿಸಿ ಆದೇಶ ಮಾಡಿದ್ದಾರೆ.