ಪ್ರೀತಿ ನಿರಾಕರಿಸಿದ್ದಕ್ಕೆ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಆರೋಪಿ ಅರೆಸ್ಟ್
ಮಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಟ್ವಾಳದ (Bantwal) ಕಕ್ಕೆಪದವು ನಿವಾಸಿಯಾಗಿದ್ದ ಲಾವಣ್ಯಳನ್ನು ಕೊಲೆ ಮಾಡಿದ್ದ ಆಕೆಯ ದೂರದ ಸಂಬಂಧಿ ಆರೋಪಿ ಚೇತನ್ನನ್ನು ಬಂಟ್ವಾಳ ಪೊಲೀಸರು ಮಂಗಳೂರಿನ ಪಚ್ಚನಾಡಿಯಲ್ಲಿ ಬಂಧಿಸಿದ್ದಾರೆ. ಇದನ್ನೂ ಓದಿ: ಪ್ರೀತಿ

ಮಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಟ್ವಾಳದ (Bantwal) ಕಕ್ಕೆಪದವು ನಿವಾಸಿಯಾಗಿದ್ದ ಲಾವಣ್ಯಳನ್ನು ಕೊಲೆ ಮಾಡಿದ್ದ ಆಕೆಯ ದೂರದ ಸಂಬಂಧಿ ಆರೋಪಿ ಚೇತನ್ನನ್ನು ಬಂಟ್ವಾಳ ಪೊಲೀಸರು ಮಂಗಳೂರಿನ ಪಚ್ಚನಾಡಿಯಲ್ಲಿ ಬಂಧಿಸಿದ್ದಾರೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕೆ ಬಸ್ ನಿಲ್ದಾಣದಲ್ಲಿ ಮಚ್ಚಿನಿಂದ ದಾಳಿ – ಗಂಭೀರ ಗಾಯಗೊಂಡಿದ್ದ ಯುವತಿ ಸಾವು ಕೊಲೆ ಬಳಿಕ ಪರಾರಿಯಾಗಿದ್ದ ಆರೋಪಿಯ ಬಂಧನಕ್ಕಾಗಿ ಎರಡು ತಂಡಗಳನ್ನು ರಚಿಸಲಾಗಿತ್ತು. ಬರ್ಬರವಾಗಿ ಹತ್ಯೆ ಮಾಡಿ ಬಸ್ ನಿಲ್ದಾಣದಿಂದ ಹೊರಗೆ ಬಂದಿದ್ದ ಆರೋಪಿ ಬ್ಯಾಗ್ ಹಾಗೂ ಮೊಬೈಲ್ ಬಿಟ್ಟು ಕಾರಿನಲ್ಲಿ ಪರಾರಿಯಾಗಿದ್ದ. ತೀವ್ರ ಶೋಧ ನಡೆಸಿದ ಪೊಲೀಸರು ಮಂಗಳೂರಿನ ಪಚ್ಚನಾಡಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಈ ವೇಳೆ ಚೇತನ್ ತಾನು ಇಲಿಪಾಷಾಣ ಸೇವಿಸಿರುವುದಾಗಿ ಹೇಳಿದ್ದು, ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಬಂಟ್ವಾಳ ಶವಗಾರದಿಂದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಯುವತಿ ಲಾವಣ್ಯ ಮೃತದೇಹ ಶಿಫ್ಟ್ ಮಾಡಲಾಗಿದೆ.ಇದನ್ನೂ ಓದಿ: ತುಮಕೂರಿನಲ್ಲಿ ಹಿಟ್ & ರನ್ – ಮನೆಮುಂದೆ ಆಟವಾಡುತ್ತಿದ್ದ 2 ವರ್ಷದ ಬಾಲಕ ಸಾವು ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ: ಯುವತಿ ಪ್ರೀತಿ ನಿರಾಕರಿಸಿದರೂ ಪ್ರೀತಿಸುವಂತೆ ಆರೋಪಿ ಚೇತನ್ ಒತ್ತಾಯಿಸುತ್ತಿದ್ದ. ಗುರುವಾರ (ಜು.16) ಲಾವಣ್ಯ ಬಿ.ಸಿ ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಕಕ್ಕೆಪದವುಗೆ ಹೋಗುವ ಬಸ್ಸಿನಲ್ಲಿ ಕುಳಿತಿದ್ದ ವೇಳೆ ಆಕೆಯನ್ನು ಹಿಂಬಾಲಿಸಿ ಬಂದ ಚೇತನ್ ಆಕೆಯನ್ನು ಬಸ್ಸಿನಿಂದ ಇಳಿಸಿ ಮಚ್ಚಿನಿಂದ ದಾಳಿ ನಡೆಸಿದ್ದ. ಇದಲ್ಲದೇ ಕಳೆದ ಹಲವಾರು ದಿನಗಳಿಂದ ಲಾವಣ್ಯಗೆ ಚೇತನ್ ಕಿರುಕುಳ ನೀಡುತ್ತಿದ್ದ ಎಂದು ತಿಳಿದುಬಂದಿದೆ.ಇದನ್ನೂ ಓದಿ: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ – 6 ಮಂದಿ ಮೀನುಗಾರರ ರಕ್ಷಣೆ