ಡಿಸೆಂಬರ್ ಒಳಗೆ ಜಿಬಿಎ ಚುನಾವಣೆ ಮಾಡಿ ಮುಗಿಸುತ್ತೇವೆ: ಡಿ.ಕೆ ಶಿವಕುಮಾರ್
ನವದೆಹಲಿ: ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಸಮಯ ನೀಡಿದೆ. ಡಿಸೆಂಬರ್ ಒಳಗೆ ಮಾಡಿ ಮುಗಿಸುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಗ್ರಾಮ ಪಂಚಾಯತ್ಗಳಲ್ಲಿ ಅಧಿಕಾರಿಗಳ ಮೂಲಕ ಆಡಳಿತ ನಡೆಸುವುದು ಸರಿಯಲ್ಲ, ಸ್ಥಳೀಯ ಚುನಾವಣೆಗಳನ್ನು ಮಾಡಬೇಕಿದೆ. ಶೀಘ್ರದಲ್ಲೇ ಗ್ರಾಮ ಪಂಚಾಯತಿಗೂ ಚುನಾವಣೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಬಿಡದಿ ವಿಚಾ

ನವದೆಹಲಿ: ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಸಮಯ ನೀಡಿದೆ. ಡಿಸೆಂಬರ್ ಒಳಗೆ ಮಾಡಿ ಮುಗಿಸುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಗ್ರಾಮ ಪಂಚಾಯತ್ಗಳಲ್ಲಿ ಅಧಿಕಾರಿಗಳ ಮೂಲಕ ಆಡಳಿತ ನಡೆಸುವುದು ಸರಿಯಲ್ಲ, ಸ್ಥಳೀಯ ಚುನಾವಣೆಗಳನ್ನು ಮಾಡಬೇಕಿದೆ. ಶೀಘ್ರದಲ್ಲೇ ಗ್ರಾಮ ಪಂಚಾಯತಿಗೂ ಚುನಾವಣೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಬಿಡದಿ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ಬಗ್ಗೆ ನಾನು ಮಾತನಾಡುವುದಿಲ್ಲ. ನಾನು ಹೇಳಬೇಕಿರುವುದನ್ನು ಈಗಾಗಲೇ ಹೇಳಿದ್ದೇನೆ ಎಂದು ಹೇಳಿದ್ದಾರೆ. ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆಗಳಾಗಿದೆ. ನಾನು ಈಗಾಗಲೇ ಆ ಕುರಿತು ತಯಾರಿ ಮಾಡಿಕೊಂಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ನಾಳೆ ಇಲ್ಲಿಗೆ ಬರುತ್ತಾರೆ, ಅವರು ಬಂದ ನಂತರ ಈ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
Read the complete story at Prajavani