ನೀರಿನ ಸಂಪ್ ವಿಚಾರಕ್ಕೆ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ
ಬೆಂಗಳೂರು: ಕಳಪೆ ಗುಣಮಟ್ಟದ ನೀರಿನ ಸಂಪ್ ನಿರ್ಮಾಣದ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಹತ್ಯೆ ನಡೆದಿದೆ. ಬೆಂಗಳೂರು ಉತ್ತರ ತಾಲೂಕು ಕಿತ್ತನಹಳ್ಳಿಯಲ್ಲಿ ಕಳೆದ ರಾತ್ರಿ ಘಟನೆ ನಡೆದಿದೆ. ರವಿ (35) ಕೊಲೆಯಾದ ಗಾರೆ ಮೇಸ್ತ್ರಿ ಸಹೋದರ ಎಂದು ಗುರುತಿಸಲಾಗಿದೆ. ಇನ್ನೂ ಮನೆಯ ಮಾಲೀಕ ದೇವರಾಜ್ ಹಾಗೂ ಆತನ ಮಗ ಸೇರಿದಂತೆ ನಾಲ್ವರು ಕೊಲೆ

ಬೆಂಗಳೂರು: ಕಳಪೆ ಗುಣಮಟ್ಟದ ನೀರಿನ ಸಂಪ್ ನಿರ್ಮಾಣದ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಹತ್ಯೆ ನಡೆದಿದೆ. ಬೆಂಗಳೂರು ಉತ್ತರ ತಾಲೂಕು ಕಿತ್ತನಹಳ್ಳಿಯಲ್ಲಿ ಕಳೆದ ರಾತ್ರಿ ಘಟನೆ ನಡೆದಿದೆ. ರವಿ (35) ಕೊಲೆಯಾದ ಗಾರೆ ಮೇಸ್ತ್ರಿ ಸಹೋದರ ಎಂದು ಗುರುತಿಸಲಾಗಿದೆ. ಇನ್ನೂ ಮನೆಯ ಮಾಲೀಕ ದೇವರಾಜ್ ಹಾಗೂ ಆತನ ಮಗ ಸೇರಿದಂತೆ ನಾಲ್ವರು ಕೊಲೆ ಆರೋಪಿಗಳು. ಇದನ್ನೂ ಓದಿ: ತುಮಕೂರಿನಲ್ಲಿ ಹಿಟ್ & ರನ್ – ಮನೆಮುಂದೆ ಆಟವಾಡುತ್ತಿದ್ದ 2 ವರ್ಷದ ಬಾಲಕ ಸಾವು ಮನೆಯ ನೀರಿನ ಸಂಪಿನ ಚೇಂಬರ್ ಕವರ್ ಸರಿಯಾಗಿ ಕಟ್ಟಿಲ್ಲ ಅಂತ ನಿನ್ನೆ ರಾತ್ರಿ 8:30 ಕ್ಕೆ ರವಿ ಬರ್ತಿದ್ದಂತೆ ದೇವರಾಜು ಮತ್ತು ಗ್ಯಾಂಗ್ ಏಕಾಏಕಿ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದಾಗಿ ಸ್ಥಳದಲ್ಲೇ ರವಿ ಸಾವನ್ನಪ್ಪಿದ್ದಾನೆ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ವಿಕ್ಟೋರಿಯಾ ಶವಾಗಾರಕ್ಕೆ ರವಾನಿಸಿದ್ದಾರೆ. ಆರೋಪಿಗಳಾದ ದೇವರಾಜ್ ಮತ್ತು ಆತನ ಮಗ ಸೇರಿದಂತೆ ನಾಲ್ವರ ಬಂಧಿಸಿ ವಿಚಾರಣೆ ನಡೆಸಲಾಗಿದೆ. ಇದನ್ನೂ ಓದಿ: ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತನ ಭೀಕರ ಹತ್ಯೆ