ಕತಾರ್ ಶಾಲೆಗಳಲ್ಲಿ ಕನ್ನಡ ಬೋಧನೆಗೆ ಭಾರತೀಯ ರಾಯಭಾರ ಕಚೇರಿ ಬೆಂಬಲ
ನಮ್ಮ ಎನ್ಆರ್ಐ ವಿಭಾಗಕ್ಕೆ ಭೇಟಿ ನೀಡಿದೋಹಾ: ಕತಾರ್ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷಾ ಬೋಧನೆ ಆರಂಭಿಸಲು ಅಗತ್ಯವಿರುವ ಎಲ್ಲ ರೀತಿಯ ಆಡಳಿತಾತ್ಮಕ ಮತ್ತು ಸಾಂಸ್ಥಿಕ ಬೆಂಬಲ ನೀಡಲಾಗುವುದು ಎಂದು ಭಾರತೀಯ ರಾಯಭಾರ ಕಚೇರಿಯ ಶಿಕ್ಷಣ ಮತ್ತು ಸಾಂಸ್ಕೃತಿಕ ವಿಭಾಗದ ಪ್ರಥಮ ಕಾರ್ಯದರ್ಶಿ ಹರೀಶ್ ಪಾಂಡೆ ತಿಳಿಸಿದ್ದಾರೆ.ಇರಾನ್ ದಾಳಿ ಆತಂಕ: ಕತಾರ್ ಉಡುಗೊರೆ ನೀಡಿದ್ದ ವಿಮ

ನಮ್ಮ ಎನ್ಆರ್ಐ ವಿಭಾಗಕ್ಕೆ ಭೇಟಿ ನೀಡಿದೋಹಾ: ಕತಾರ್ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷಾ ಬೋಧನೆ ಆರಂಭಿಸಲು ಅಗತ್ಯವಿರುವ ಎಲ್ಲ ರೀತಿಯ ಆಡಳಿತಾತ್ಮಕ ಮತ್ತು ಸಾಂಸ್ಥಿಕ ಬೆಂಬಲ ನೀಡಲಾಗುವುದು ಎಂದು ಭಾರತೀಯ ರಾಯಭಾರ ಕಚೇರಿಯ ಶಿಕ್ಷಣ ಮತ್ತು ಸಾಂಸ್ಕೃತಿಕ ವಿಭಾಗದ ಪ್ರಥಮ ಕಾರ್ಯದರ್ಶಿ ಹರೀಶ್ ಪಾಂಡೆ ತಿಳಿಸಿದ್ದಾರೆ.ಇರಾನ್ ದಾಳಿ ಆತಂಕ: ಕತಾರ್ ಉಡುಗೊರೆ ನೀಡಿದ್ದ ವಿಮಾನ ಏರದ ಡೊನಾಲ್ಡ್ ಟ್ರಂಪ್ಕರ್ನಾಟಕ ಸಂಘ ಕತಾರ್ (ಕೆಎಸ್ಕ್ಯೂ) ನೂತನ ವ್ಯವಸ್ಥಾಪನಾ ಸಮಿತಿಯು ಅಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು ನೇತೃತ್ವದಲ್ಲಿ ಭಾರತೀಯ ರಾಯಭಾರ ಕಚೇರಿಗೆ ಭೇಟಿ ನೀಡಿ, 2026–28ರ ಅವಧಿಯ ಕಾರ್ಯಯೋಜನೆ, ವಿದ್ಯಾರ್ಥಿ ಒಕ್ಕೂಟ ಹಾಗೂ ಕನ್ನಡ ಭಾಷಾ ತರಗತಿಗಳ ಆರಂಭ ಕುರಿತು ಚರ್ಚಿಸಿತು.ಈ ವೇಳೆ ಮಾತನಾಡಿದ ಹರೀಶ್ ಪಾಂಡೆ, ಅನಿವಾಸಿ ಭಾರತೀಯ ಮಕ್ಕಳಲ್ಲಿ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕತಾರ್ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಪಠ್ಯಕ್ರಮದ ಭಾಗವಾಗಿ ಪರಿಚಯಿಸಲು ಭಾರತೀಯ ರಾಯಭಾರ ಕಚೇರಿ ಅಗತ್ಯ ಆಡಳಿತಾತ್ಮಕ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.ಕತಾರ್ ಉಪ ರಾಯಭಾರಿ ಸಂದೀಪ್ ಕುಮಾರ್ ಜೊತೆ ಕನ್ನಡ ಸಂಘದ ಪದಾಧಿಕಾರಿಗಳ ಚರ್ಚೆಕರ್ನಾಟಕ ಸಂಘ ಕತಾರ್ ಆಯೋಜಿಸಲಿರುವ ಶೈಕ್ಷಣಿಕ, ಸಾಮಾಜಿಕ ಹಾಗೂ ಸಮುದಾಯ ಸೇವೆಯ ಕಾರ್ಯಕ್ರಮಗಳಿಗೆ ರಾಯಭಾರ ಕಚೇರಿ ನಿರಂತರ ಬೆಂಬಲ ನೀಡಲಿದೆ ಎಂದೂ ಅವರು ತಿಳಿಸಿದರು. ಭಾರತದ ಭಾಷಾ ಮತ್ತು ಸಾಂಸ್ಕೃತಿಕ ವೈವಿಧ್ಯವನ್ನು ಉತ್ತೇಜಿಸುವ ಸಮುದಾಯದ ಪ್ರಯತ್ನಗಳಿಗೆ ರಾಯಭಾರ ಕಚೇರಿ ಸದಾ ಪ್ರೋತ್ಸಾಹ ನೀಡುತ್ತದೆ ಎಂದು ಹೇಳಿದರು.ಸಭೆಯಲ್ಲಿ ಸಂಘದ ನೂತನ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಪರಿಚಯಿಸಲಾಯಿತು. ಮುಂದಿನ ಎರಡು ವರ್ಷಗಳಲ್ಲಿ ಹಮ್ಮಿಕೊಳ್ಳಲಿರುವ ವಿವಿಧ ಕಾರ್ಯಕ್ರಮಗಳು ಹಾಗೂ ಕನ್ನಡ ಭಾಷಾ ತರಗತಿಗಳ ರೂಪುರೇಷೆಗಳ ಕುರಿತು ಸಮಗ್ರ ಚರ್ಚೆ ನಡೆಯಿತು.ಭಾರತೀಯ ರಾಯಭಾರ ಕಚೇರಿಯ ಬೆಂಬಲಕ್ಕೆ ಕರ್ನಾಟಕ ಸಂಘ ಕತಾರ್ ಅಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಕೃತಜ್ಞತೆ ಸಲ್ಲಿಸಿದರು. ಸಭೆಯ ಅಂತ್ಯದಲ್ಲಿ ಹರೀಶ್ ಪಾಂಡೆ ಅವರಿಗೆ ಸಾಂಪ್ರದಾಯಿಕವಾಗಿ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.ಕತಾರ್ ಕರ್ನಾಟಕ ಸಂಘದಿಂದ ಪರಿಸರ ದಿನ: ಭಾರತದ ರಾಯಭಾರಿ, ಪುರಸಭೆ ಅಧಿಕಾರಿಗಳು ಭಾಗಿ