ಮಂಗಳೂರಿನಲ್ಲಿ ತಲವಾರಿನಿಂದ ಹಲ್ಲೆ ನಡೆಸಿ ಯುವತಿ ಹತ್ಯೆ ಪ್ರಕರಣ: ಆರೋಪಿ ಬಂಧನ
ಮಂಗಳೂರು: ಬಿ.ಸಿ.ರೋಡ್ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ಯುವತಿಯೊಬ್ಬಳ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಯನ್ನು ಪೊಲೀಸರು ಶುಕ್ರವಾರ ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಚೇತನ್ ಬಂಧಿತ ಆರೋಪಿ.'ಕಕ್ಯಪದವಿನ ಲಾವಣ್ಯ (21) ಎಂಬ ಯುವತಿ ಕೆಲಸ ಮುಗಿಸಿ ಮನೆಗೆ ಹೋಗಲು ಬಸ್ ಹತ್ತಿ ಕುಳಿತಿದ್ದರು. ಆ ವೇಳೆ ಬಂದ ಆರೋಪಿ ಚೇತನ್ ಆಕೆಯ

ಮಂಗಳೂರು: ಬಿ.ಸಿ.ರೋಡ್ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ಯುವತಿಯೊಬ್ಬಳ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಯನ್ನು ಪೊಲೀಸರು ಶುಕ್ರವಾರ ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಚೇತನ್ ಬಂಧಿತ ಆರೋಪಿ.'ಕಕ್ಯಪದವಿನ ಲಾವಣ್ಯ (21) ಎಂಬ ಯುವತಿ ಕೆಲಸ ಮುಗಿಸಿ ಮನೆಗೆ ಹೋಗಲು ಬಸ್ ಹತ್ತಿ ಕುಳಿತಿದ್ದರು. ಆ ವೇಳೆ ಬಂದ ಆರೋಪಿ ಚೇತನ್ ಆಕೆಯ ಮೇಲೆ ತಲವಾರಿನಿಂದ ಹಲ್ಲೆ ಮಾಡಿದ್ದು, ಆಕೆ ಮೃತಪಟ್ಟಿದ್ದರು. ಆರೋಪಿ ಪತ್ತೆಗೆ ತಂಡಗಳನ್ನು ರಚಿಸಲಾಗಿತ್ತು. ಶುಕ್ರವಾರ ಬೆಳಿಗ್ಗೆ ಆರೋಪಿಯನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ತಿಳಿಸಿದ್ದಾರೆ.ವಿಚಾರಣೆ ವೇಳೆ ಆರೋಪಿಯು, ಇಲಿ ಪಾಷಾಣ ಸೇವಿಸಿರುವುದಾಗಿ ಹೇಳಿಕೊಂಡಿದ್ದು, ಸದ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.ಆರೋಪಿಯು ಹತ್ಯೆಯಾಗಿರುವ ಲಾವಣ್ಯಳ ದೂರದ ಸಂಬಂಧಿಯಾಗಿದ್ದು, ಆಕೆಯನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದ ಎಂದು ತಿಳಿಸಿದ್ದಾರೆ.
Read the complete story at Prajavani