SIRನಲ್ಲಿ ಭಾಗಿಯಾಗದಿದ್ದರೆ ‘ಗ್ಯಾರಂಟಿ’ ಲಾಭ ಪಡೆಯಲು ತೊಂದರೆ: ಅಂಜಲಿ ನಿಂಬಾಳಕರ
ಬೆಳಗಾವಿ: ‘ಎಸ್ಐಆರ್ ಪ್ರಕ್ರಿಯೆಯಲ್ಲಿ ಎಲ್ಲರೂ ಭಾಗಿಯಾಗಬೇಕು. ಇಲ್ಲದಿದ್ದರೆ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ತೊಂದರೆಯಾಗುತ್ತದೆ’ ಎಂದು ಎಐಸಿಸಿ ಕಾರ್ಯದರ್ಶಿ ಡಾ.ಅಂಜಲಿ ನಿಂಬಾಳಕರ ಹೇಳಿದರು.ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಳಗಾವಿ ಜಿಲ್ಲೆಯ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲಿ ಶೇ 70ಕ್ಕಿಂತ ಗಣಕೀಕರಣ ಕಾರ್ಯ ಪೂರ್ಣಗೊಂಡಿದೆ. ಬೇಗ ಶೇ

ಬೆಳಗಾವಿ: ‘ಎಸ್ಐಆರ್ ಪ್ರಕ್ರಿಯೆಯಲ್ಲಿ ಎಲ್ಲರೂ ಭಾಗಿಯಾಗಬೇಕು. ಇಲ್ಲದಿದ್ದರೆ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ತೊಂದರೆಯಾಗುತ್ತದೆ’ ಎಂದು ಎಐಸಿಸಿ ಕಾರ್ಯದರ್ಶಿ ಡಾ.ಅಂಜಲಿ ನಿಂಬಾಳಕರ ಹೇಳಿದರು.ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಳಗಾವಿ ಜಿಲ್ಲೆಯ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲಿ ಶೇ 70ಕ್ಕಿಂತ ಗಣಕೀಕರಣ ಕಾರ್ಯ ಪೂರ್ಣಗೊಂಡಿದೆ. ಬೇಗ ಶೇ 100ರಷ್ಟು ಪ್ರಗತಿ ಸಾಧಿಸಲು ಎಲ್ಲರೂ ಸಹಕರಿಸಬೇಕು’ ಎಂದು ಕೋರಿದರು.‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜನರ ಮತದಾನದ ಹಕ್ಕನ್ನು ಕಸಿದುಕೊಂಡು ಭವಿಷ್ಯದಲ್ಲಿ ಪೌರತ್ವದ ಮೇಲೆ ಅನುಮಾನ ವ್ಯಕ್ತಪಡಿಸುವ ಸಾಧ್ಯತೆ ಇದೆ. ಈಗಾಗಲೇ ಪಶ್ಚಿಮ ಬಂಗಾಳ, ಬಿಹಾರ ರಾಜ್ಯಗಳಲ್ಲಿ ಇಂಥ ಘಟನೆ ನಡೆದಿವೆ. ಹಾಗಾಗಿ ಎಲ್ಲರೂ ಎಚ್ಚರ ವಹಿಸಬೇಕು’ ಎಂದರು.
Read the complete story at Prajavani