ಮುಜರಾಯಿ ದೇವಸ್ಥಾನಗಳ ಹುಂಡಿ ಕಾವಲಿಗೆ ಕಮಾಂಡ್ ಸೆಂಟರ್: ಪರಮೇಶ್ವರ
ಬೆಂಗಳೂರು: ರಾಜ್ಯದಲ್ಲಿ ಮುಜರಾಯಿ ಇಲಾಖೆ ದೇವಸ್ಥಾನಗಳ ಹುಂಡಿಗಳ ಮೇಲೆ ಸಂಪೂರ್ಣವಾಗಿ ಸಿ.ಸಿ.ಟಿ.ವಿ ಕ್ಯಾಮೆರಾ ಕಣ್ಗಾವಲು ಇಡಲಾಗುವುದು. ಕೇಂದ್ರ ಕಚೇರಿಯಿಂದಲೇ ನಿಗಾವಹಿಸಲು ‘ಕಮಾಂಡ್ ಸೆಂಟರ್’ ತೆರೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಹೇಳಿದರು.ಜೈಲುಗಳಲ್ಲಿನ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹಾಗೂ ಕಾರಾಗೃಹಗಳೊಂದಿಗೆ ಸಮನ್ವಯ ಸಾಧಿಸಲು ‘ಸೆಂ
ಬೆಂಗಳೂರು: ರಾಜ್ಯದಲ್ಲಿ ಮುಜರಾಯಿ ಇಲಾಖೆ ದೇವಸ್ಥಾನಗಳ ಹುಂಡಿಗಳ ಮೇಲೆ ಸಂಪೂರ್ಣವಾಗಿ ಸಿ.ಸಿ.ಟಿ.ವಿ ಕ್ಯಾಮೆರಾ ಕಣ್ಗಾವಲು ಇಡಲಾಗುವುದು. ಕೇಂದ್ರ ಕಚೇರಿಯಿಂದಲೇ ನಿಗಾವಹಿಸಲು ‘ಕಮಾಂಡ್ ಸೆಂಟರ್’ ತೆರೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಹೇಳಿದರು.ಜೈಲುಗಳಲ್ಲಿನ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹಾಗೂ ಕಾರಾಗೃಹಗಳೊಂದಿಗೆ ಸಮನ್ವಯ ಸಾಧಿಸಲು ‘ಸೆಂಟ್ರಲ್ ಕಮಾಂಡ್ ಸೆಂಟರ್’ ಆರಂಭಿಸಲಾಗಿದೆ. ಅದೇ ಮಾದರಿಯಲ್ಲಿ ದೇವಸ್ಥಾನದ ಕ್ಯಾಮೆರಾಗಳನ್ನು ಕಮಾಂಡ್ ಸೆಂಟರ್ಗೆ ಸಂಪರ್ಕ ಕಲ್ಪಿಸಲಾಗುವುದು. ಈ ಮೂಲಕ ದೇವಸ್ಥಾನಗಳ ಕಾಣಿಕೆ ಹುಂಡಿ ಹಣ ಕಳವು ಮತ್ತು ಲೆಕ್ಕಪತ್ರ ನಿರ್ವಹಣೆಯಲ್ಲಿ ಆಗುತ್ತಿರುವ ದುರುಪಯೋಗ ತಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ರಾಜ್ಯದಲ್ಲಿ ಮುಜರಾಯಿ ಇಲಾಖೆಯ 39 ಸಾವಿರ ದೇವಸ್ಥಾನಗಳಿದ್ದು, ‘ಎ’ ವರ್ಗದ ದೇವಾಲಯಗಳಿಗೆ ಹೆಚ್ಚಿನ ಆದಾಯ ಬರುತ್ತಿದೆ. ಪ್ರತಿ ದೇವಸ್ಥಾನದ ಹುಂಡಿಯ ಮೇಲೆ ನಿಗಾ ವಹಿಸಲು 4 ಕಡೆ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಿ, ಕಮಾಂಡ್ ಸೆಂಟರ್ ಮೂಲಕ ಕಣ್ಗಾವಲು ಇಡಲಾಗುತ್ತದೆ ಎಂದರು.‘ಹೊರ ರಾಜ್ಯದ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ರಾಜ್ಯದ ಮುಜರಾಯಿ ಇಲಾಖೆಯ ಆಸ್ತಿಗಳಿದ್ದು, ಅವುಗಳನ್ನು ಸಂರಕ್ಷಣೆ ಮಾಡಬೇಕು. ತಿರುಪತಿಯಲ್ಲಿ ರಾಜ್ಯಕ್ಕೆ ಸೇರಿದ 7 ಎಕರೆ ಭೂಮಿ ಇದ್ದು, ಅಲ್ಲಿಗೆ ತೆರಳುವ ಯಾತ್ರಾರ್ಥಿಗಳಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ಶ್ರೀಶೈಲ, ವಾರಾಣಸಿ, ತುಳಜಾಪುರದಲ್ಲಿರುವ ಇಲಾಖೆಯ ಆಸ್ತಿಗಳಲ್ಲಿ ವಸತಿಗೃಹ ಮತ್ತು ಯಾತ್ರಿಗಳಿಗೆ ಉಳಿದುಕೊಳ್ಳಲು ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ’ ಎಂದು ವಿವರಿಸಿದರು.ಕಾಣಿಕೆ ಹಣ ದೇವಸ್ಥಾನದ ಅಭಿವೃದ್ಧಿಗೆ‘ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾಗ ಅಲ್ಲಿನ ವ್ಯವಸ್ಥೆ ಪರಿಶೀಲಿಸಿ, ಯಾತ್ರಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ರೂಪಿಸುವಂತೆ ಸೂಚಿಸಿದ್ದೆ. ಎಲ್ಲಾ ದೇವಸ್ಥಾನಗಳಲ್ಲಿನ ಭಕ್ತರ ಕಾಣಿಕೆಯ ಹಣದ ಸರಿಯಾದ ಲೆಕ್ಕ ನೀಡುವಂತೆ ಸೂಚನೆ ನೀಡಲಾಗಿದೆ’ ಎಂದರು.‘ಎ ವರ್ಗದ ದೇವಸ್ಥಾನಗಳಲ್ಲಿ ಸುಮಾರು ₹2,521 ಕೋಟಿ ನಿಶ್ಚಿತ ಠೇವಣಿಯಿದೆ. ಈ ಹಣವನ್ನು ಆಯಾ ದೇವಸ್ಥಾನಗಳ ಅಭಿವೃದ್ಧಿಗೆ ಮಾತ್ರ ಖರ್ಚು ಮಾಡಬೇಕು. ದೇವಸ್ಥಾನಗಳ ಹಣವನ್ನು ಯಾವುದೇ ಕಾರಣಕ್ಕೂ ಅನ್ಯ ಉದ್ದೇಶಕ್ಕೆ ಬಳಸುವುದಿಲ್ಲ. ಶೇ 10ರಷ್ಟು ಹಣ ಮಾತ್ರ ‘ಸಿ’ ವರ್ಗದ ದೇವಸ್ಥಾನಗಳ ಅಭಿವೃದ್ಧಿಗೆ ವಿನಿಯೋಗಿಸಲಾಗುವುದು’ ಎಂದರು.