ಕೋರ್ಟ್ ಆದೇಶದಂತೆ ವಾಂಗ್ಚೂಕ್ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ: ಬಿಜೆಪಿ
ನವದೆಹಲಿ: ಶಿಕ್ಷಣ ತಜ್ಞ, ಪರಿಸರ ಕಾರ್ಯಕರ್ತ ಸೊನಮ್ ವಾಂಗ್ಚೂಕ್ ಅವರನ್ನು ಆಸ್ಪತ್ರೆಗೆ ದಾಖಲಿಸಿರುವುದನ್ನು ಸಮರ್ಥಿಸಿಕೊಂಡಿರುವ ಬಿಜೆಪಿ, ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಶಹನವಾಜ್ ಹುಸೇನ್, ಪೊಲೀಸರ ಕ್ರಮವನ್ನು ಟೀಕಿಸಿದ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸ

ನವದೆಹಲಿ: ಶಿಕ್ಷಣ ತಜ್ಞ, ಪರಿಸರ ಕಾರ್ಯಕರ್ತ ಸೊನಮ್ ವಾಂಗ್ಚೂಕ್ ಅವರನ್ನು ಆಸ್ಪತ್ರೆಗೆ ದಾಖಲಿಸಿರುವುದನ್ನು ಸಮರ್ಥಿಸಿಕೊಂಡಿರುವ ಬಿಜೆಪಿ, ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಶಹನವಾಜ್ ಹುಸೇನ್, ಪೊಲೀಸರ ಕ್ರಮವನ್ನು ಟೀಕಿಸಿದ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ವಾಂಗ್ಚೂಕ್ ಅವರ ಆರೋಗ್ಯ ಹದಗೆಡಲಿ ಎಂದು ಇವರೆಲ್ಲಾ(ವಿಪಕ್ಷಗಳು) ಬಯಸಿದ್ದರೇ?’ ಎಂದು ಪ್ರಶ್ನಿಸಿದ್ದಾರೆ.‘ವಾಂಗ್ಚೂಕ್ ಅವರ ಆರೋಗ್ಯದ ಮೇಲೆ ಸೂಕ್ತ ನಿಗಾ ಇಡುವಂತೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ನ್ಯಾಯಾಲಯದ ಆದೇಶದ ಮೇರೆಗೆ ಅವರನ್ನು(ವಾಂಗ್ಚೂಕ್) ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಹೇಳಿದ್ದಾರೆ.ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಪ್ರತಿಕ್ರಿಯಿಸಿ, ಪೊಲೀಸರು ಮಾನವೀಯತೆಯಿಂದ ವರ್ತಿಸಿದ್ದು, ನ್ಯಾಯಾಲಯದ ನಿರ್ದೇಶನವನ್ನು ಪಾಲಿಸಿದ್ದಾರೆ ಎಂದು ಹೇಳಿದ್ದಾರೆ.‘ರಾಜಕೀಯ ಉದ್ದೇಶಕ್ಕೆ ವಾಂಗ್ಚೂಕ್ ಅವರ ಸ್ಥಿತಿ ಇನ್ನಷ್ಟು ಹದಗೆಡುವುದನ್ನು ಪ್ರತಿಪಕ್ಷಗಳು ಬಯಸುತ್ತಿದ್ದವೇ? ಇಂತಹ ಪರಿಸ್ಥಿತಿಯಲ್ಲಿ ವೈದ್ಯಕೀಯ ನೆರವನ್ನು ಖಚಿತಪಡಿಸಿಕೊಳ್ಳುವುದು ಜವಾಬ್ದಾರಿಯುತ ಕ್ರಮವಾಗಿದೆ’ ಎಂದು ಹೇಳಿದ್ದಾರೆ.20 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದ ವಾಂಗ್ಚೂಕ್ ಅವರನ್ನು ದೆಹಲಿ ಹೈಕೋರ್ಟ್ ಆದೇಶದ ಮೇರೆಗೆ ದೆಹಲಿ ಪೊಲೀಸರು ಇಂದು ಬಲವಂತವಾಗಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಚಿಕಿತ್ಸೆ ನಿರಾಕರಿಸಿರುವ ವಾಂಗ್ಚೂಕ್ ಅವರು ಆಸ್ಪತ್ರೆಯಲ್ಲೂ ಉಪವಾಸ ಮುಂದುವರಿಸಿದ್ದಾರೆ.