ರೆಡ್ಡಿ ದ್ಯಾವರಹಳ್ಳಿ ಡೇರಿ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ
ಗೌರಿಬಿದನೂರು: ತಾಲ್ಲೂಕಿನ ತೊಂಡೇಭಾವಿ ಹೋಬಳಿಯ ಜಿ.ಬೊಮ್ಮಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೆಡ್ಡಿದ್ಯಾವರಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ನರಸೇಗೌಡ ಅಧ್ಯಕ್ಷರಾಗಿ, ಸುಬ್ಬರಾಯಪ್ಪ ಉಪಾಧ್ಯಕ್ಷರಾಗಿ ಅವಿರೋಧವಾಗಿ ಶುಕ್ರವಾರ ಆಯ್ಕೆಯಾದರು.‘ಗ್ರಾಮೀಣ ಭಾಗದಲ್ಲಿ ರೈತರು ಹೈನುಗಾರಿಕೆಯನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಹಾಲು ಉತ್ಪಾದಕರಿ

ಗೌರಿಬಿದನೂರು: ತಾಲ್ಲೂಕಿನ ತೊಂಡೇಭಾವಿ ಹೋಬಳಿಯ ಜಿ.ಬೊಮ್ಮಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೆಡ್ಡಿದ್ಯಾವರಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ನರಸೇಗೌಡ ಅಧ್ಯಕ್ಷರಾಗಿ, ಸುಬ್ಬರಾಯಪ್ಪ ಉಪಾಧ್ಯಕ್ಷರಾಗಿ ಅವಿರೋಧವಾಗಿ ಶುಕ್ರವಾರ ಆಯ್ಕೆಯಾದರು.‘ಗ್ರಾಮೀಣ ಭಾಗದಲ್ಲಿ ರೈತರು ಹೈನುಗಾರಿಕೆಯನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಹಾಲು ಉತ್ಪಾದಕರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿ ಸಂಘವನ್ನು ಆರ್ಥಿಕವಾಗಿ ಮುನ್ನೆಡೆಯುವಂತೆ ಮಾಡಬೇಕು’ ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ತಿಳಿಸಿದರು.ಡಿಸಿಸಿ ಬ್ಯಾಂಕ್ ನಿರ್ದೇಶಕ ವೆಂಕಟರಾಮ ರೆಡ್ಡಿ, ಮಲ್ಲಸಂದ್ರ ಗಂಗಾಧರಪ್ಪ, ಬೊಮ್ಮಣ್ಣ ಹಾಜರಿದ್ದರು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260718-16-124455026
Read the complete story at Prajavani