ರೈಲ್ವೆ ಆಸ್ತಿಗಳ ಸುರಕ್ಷತೆಗೆ ಬೆಂಗಳೂರಿನಲ್ಲಿ ಡ್ರೋನ್ ಕಣ್ಗಾವಲು ಆರಂಭ
ಬೆಂಗಳೂರು: ಪ್ರಯಾಣಿಕರು ಮತ್ತು ರೈಲ್ವೆ ಆಸ್ತಿಗಳ ಸುರಕ್ಷತೆ ಮತ್ತು ಭದ್ರತೆಯನ್ನು ಬಲಪಡಿಸಲು ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ರೈಲ್ವೆ ರಕ್ಷಣಾ ಪಡೆಯು ಡ್ರೋನ್ ಕ್ಯಾಮೆರಾ ಮೂಲಕ ಕಣ್ಗಾವಲು ಇಡುವ ಕಾರ್ಯವನ್ನು ಶುಕ್ರವಾರ ಆರಂಭಿಸಿದೆ.ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಅವರು ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ಡ್ರೋನ್ ಕ

ಬೆಂಗಳೂರು: ಪ್ರಯಾಣಿಕರು ಮತ್ತು ರೈಲ್ವೆ ಆಸ್ತಿಗಳ ಸುರಕ್ಷತೆ ಮತ್ತು ಭದ್ರತೆಯನ್ನು ಬಲಪಡಿಸಲು ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ರೈಲ್ವೆ ರಕ್ಷಣಾ ಪಡೆಯು ಡ್ರೋನ್ ಕ್ಯಾಮೆರಾ ಮೂಲಕ ಕಣ್ಗಾವಲು ಇಡುವ ಕಾರ್ಯವನ್ನು ಶುಕ್ರವಾರ ಆರಂಭಿಸಿದೆ.ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಅವರು ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ಡ್ರೋನ್ ಕಣ್ಗಾವಲು ವ್ಯವಸ್ಥೆಯನ್ನು ಉದ್ಘಾಟಿಸಿದರು. ಡ್ರೋನ್ ಕ್ಯಾಮೆರಾದ ದೃಶ್ಯಗಳ ಗುಣಮಟ್ಟ, ಕಾರ್ಯಾಚರಣೆಯ ವ್ಯಾಪ್ತಿ, ಅದರ ಕಣ್ಗಾವಲಿನ ವಿಶಿಷ್ಟ್ಯತೆ, ಡ್ರೋನ್ ಸಾಮರ್ಥ್ಯವನ್ನು ಪರಿಶೀಲಿಸಿದರು.ಡ್ರೋನ್ ಕ್ಯಾಮೆರಾಗಳನ್ನು ಬೆಂಗಳೂರು ವಿಭಾಗದ ಪ್ರಮುಖ ರೈಲು ನಿಲ್ದಾಣಗಳು ಮತ್ತು ಇತರೆ ಅವಶ್ಯಕ ಸ್ಥಳಗಳಲ್ಲಿ ನಿಯೋಜಿಸಲಾಗುವುದು. ಜನಸಂದಣಿಯ ನಿರ್ವಹಣೆ, ರೈಲ್ವೆ ಆವರಣದ ಕಣ್ಗಾವಲು ಮತ್ತು ನಿಗಾ ವ್ಯವಸ್ಥೆಗೆ ಅನುವು ಮಾಡಿಕೊಡಲಿದೆ. ರೈಲ್ವೆ ಜಾಲದಾದ್ಯಂತ ಸುರಕ್ಷಿತ, ಸುಭದ್ರ ಮತ್ತು ಪ್ರಯಾಣಿಕ ಸ್ನೇಹಿ ವಾತಾವರಣವನ್ನು ಒದಗಿಸಲು ಬೆಂಗಳೂರು ವಿಭಾಗದ ರೈಲ್ವೆ ರಕ್ಷಣಾ ದಳವು ಆಧುನಿಕ ತಂತ್ರಜ್ಞಾನ ಮತ್ತು ನವೀನ ಭದ್ರತಾ ಪರಿಹಾರಗಳನ್ನು ಬಳಸಿಕೊಳ್ಳಲು ಬದ್ಧವಾಗಿದೆ ಎಂದು ಅವರು ತಿಳಿಸಿದರು.ಡ್ರೋನ್ಗಳ ನಿರ್ವಹಣೆಗೆ ಆಯ್ಕೆಯಾದ ಆರ್ಪಿಎಫ್ ಸಿಬ್ಬಂದಿ ಕರ್ನಾಟಕ ರಾಜ್ಯ ಪೊಲೀಸ್ ರಿಮೋಟ್ ಪೈಲಟ್ ತರಬೇತಿ ಸಂಸ್ಥೆಯಲ್ಲಿ ವಿಶೇಷ ತರಬೇತಿ ಪಡೆದಿದ್ದಾರೆ.ಬೆಂಗಳೂರು ವಿಭಾಗದ ಹಿರಿಯ ವಿಭಾಗೀಯ ಭದ್ರತಾ ಆಯುಕ್ತ ಶ್ರೇಯಾಂಶ್ ಚಿಂಚವಾಡೆ, ಹಿರಿಯ ರೈಲ್ವೆ ಅಧಿಕಾರಿಗಳು ಭಾಗವಹಿಸಿದ್ದರು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260718-4-1827557309