ವಾಂಗ್ಚೂಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದದ್ದು ತಪ್ಪು: ರಾಹುಲ್
ನವದೆಹಲಿ: ಜಂತರ್ಮಂತರ್ನಲ್ಲಿ ಶಾಂತಿಯುತವಾಗಿ ಉಪವಾಸ ಮಾಡುವ ಮೂಲಕ ಪ್ರತಿಭಟನೆ ಮಾಡುತ್ತಿದ್ದ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರನ್ನು ಅಲ್ಲಿಂದ ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿದ್ದು ತಪ್ಪು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೊನಮ್ ವಾಂಗ್ಚೂಕ್ ಅವರನ್ನು ನ್ಯಾಯಾಲಯದ ಸೂಚನೆ ಮೇರ

ನವದೆಹಲಿ: ಜಂತರ್ಮಂತರ್ನಲ್ಲಿ ಶಾಂತಿಯುತವಾಗಿ ಉಪವಾಸ ಮಾಡುವ ಮೂಲಕ ಪ್ರತಿಭಟನೆ ಮಾಡುತ್ತಿದ್ದ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರನ್ನು ಅಲ್ಲಿಂದ ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿದ್ದು ತಪ್ಪು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೊನಮ್ ವಾಂಗ್ಚೂಕ್ ಅವರನ್ನು ನ್ಯಾಯಾಲಯದ ಸೂಚನೆ ಮೇರೆಗೆ ದೆಹಲಿ ಪೊಲೀಸರು, ಪ್ರತಿಭಟನಾ ಸ್ಥಳದಿಂದ ಸಫ್ದರ್ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ‘ಅಸತ್ಯ ಮತ್ತು ಹಿಂಸೆಯು ಮೋದಿ ಸರ್ಕಾರದ ಮೂಲ ತತ್ವಗಳಾಗಿವೆ. ಅಹಿಂಸಾತ್ಮಕ ಉಪವಾಸ ಸತ್ಯಾಗ್ರಹದಲ್ಲಿದ್ದ ಸೊನಮ್ ವಾಂಗ್ಚೂಕ್ ಅವರನ್ನು ಜಂತರ್ ಮಂತರ್ನಿಂದ ತೆರವುಗೊಳಿಸಿದ್ದು ತಪ್ಪು. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ, ಶಿಕ್ಷಣದ ಹೆಚ್ಚುತ್ತಿರುವ ವೆಚ್ಚ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆಗಳು ಭಾರತದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಗಂಭೀರವಾದ ವಿಷಯಗಳಾಗಿವೆ’ ಎಂದು ಹೇಳಿದ್ದಾರೆ. ‘ಸರ್ಕಾರವು ಎಷ್ಟೇ ಬಲಪ್ರಯೋಗ ಮಾಡಿದರೂ, ಭಾರತದ ವಿದ್ಯಾರ್ಥಿಗಳನ್ನಾಗಲಿ ಅಥವಾ ಅವರ ಮೇಲೆ ನಂಬಿಕೆ ಮತ್ತು ಪ್ರೀತಿ ಹೊಂದಿರುವ ನಮ್ಮನ್ನಾಗಲಿ ಈ ವಿಷಯಗಳನ್ನು ಪ್ರಸ್ತಾಪಿಸುವುದರಿಂದ ತಡೆಯಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. ವಾಂಗ್ಚೂಕ್ ಅವರನ್ನು ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಕುರಿತು ಪರ–ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಇದೀಗ ಅದೇ ಸ್ಥಳದಲ್ಲಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.