ಬೆನ್ನುತಟ್ಟಿ ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
– ಚೆನ್ನಮ್ಮ ಅಂತಿಮ ದರ್ಶನ ಪಡೆದ ಗಣ್ಯರು ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ವಿಧಿವಶರಾಗಿದ್ದಾರೆ. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಸಂಜೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ದೇವೇಗೌಡರ ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ಚೆನ್ನಮ್ಮ ಅವರ ಪಾರ್ಥೀವ ಶರೀರ ಇಡಲಾಗಿದ್ದು, ಸಿಎಂ ಡಿಕೆ ಶಿವಕುಮಾರ್,

– ಚೆನ್ನಮ್ಮ ಅಂತಿಮ ದರ್ಶನ ಪಡೆದ ಗಣ್ಯರು ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ವಿಧಿವಶರಾಗಿದ್ದಾರೆ. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಸಂಜೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ದೇವೇಗೌಡರ ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ಚೆನ್ನಮ್ಮ ಅವರ ಪಾರ್ಥೀವ ಶರೀರ ಇಡಲಾಗಿದ್ದು, ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ದೇವೇಗೌಡರ ಪದ್ಮನಾಭ ನಗರದ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ (Siddaramaiah) ಅವರು ಚೆನ್ನಮ್ಮ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಬಳಿಕ ದೇವೇಗೌಡರ ಪಕ್ಕದಲ್ಲಿ ಕೆಲಕಾಲ ಕುಳಿತು ಬೆನ್ನುತಟ್ಟಿ ಸಾಂತ್ವನ ಹೇಳಿದ್ದಾರೆ. ಹೆಚ್.ಡಿ ಕುಮಾರಸ್ವಾಮಿ ಅವರಿಗೂ ಸಾಂತ್ವನ ಹೇಳಿ ಧೈರ್ಯತುಂಬಿದ್ದಾರೆ. ಗಣ್ಯರಿಂದ ಅಂತಿಮ ದರ್ಶನ ಅಷ್ಟೇ ಅಲ್ಲದೇ, ಹಲವು ರಾಜಕೀಯ ಗಣ್ಯರು ಪಕ್ಷಾತೀತವಾಗಿ ಬಂದು ಅಂತಿಮ ದರ್ಶನ ಪಡೆದಿದ್ದಾರೆ. ಕೇಂದ್ರ ಸಚಿವ ವಿ. ಸೋಮಣ್ಣ, ರಾಜ್ಯ ಸಚಿವ ಕೃಷ್ಣ ಭೈರೇಗೌಡ, ಹೆಚ್.ಡಿ ದೇವೇಗೌಡ, ಜಮೀರ್ ಅಹ್ಮದ್ ಖಾನ್, ಸಿಎಂ ಇಬ್ರಾಹಿಂ, ಮಾಜಿ ಸಚಿವ ತಮ್ಮಣ್ಣ ಸೇರಿದಂತೆ ಗಣ್ಯರು ಅಂತಿಮ ದರ್ಶನ ಪಡೆದಿದ್ದಾರೆ. ಇದರೊಂದಿಗೆ ಕುಟುಂಬಸ್ಥರಿಂದ ಪೂಜಾ ವಿಧಿ ವಿಧಾನಗಳು ನೆರವೇರುತ್ತಿದ್ದು, ಬಳಿಕ ಸಾರ್ವಜನಿಕ ದರ್ಶನಕ್ಕಾಗಿ ಪದ್ಮನಾಭನಗರದ ಮೈದಾನಕ್ಕೆ ಪಾರ್ಥೀವ ಶರೀರ ಸ್ಥಳಾಂತರಿಸಲಾಗುತ್ತದೆ. ಭಾನುವಾರ (ಜು.19) ಮಧ್ಯಾಹ್ನದ ವರೆಗೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಇರಲಿದ್ದು, ಮಧ್ಯಾಹ್ನ 3 ಗಂಟೆ ನಂತರ ಹಾಸನಕ್ಕೆ ಪಾರ್ಥೀವ ಶರೀರ ರವಾನೆ ಮಾಡಲಾಗುತ್ತದೆ.