ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ನಿಧನಕ್ಕೆ ಕಾಂಗ್ರೆಸ್ ಶಾಸಕ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ಧಾರೆ.ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನದಿಂದ ದುಃಖಿತನಾಗಿದ್ದೇನೆ. ಜನತಾ ಪರಿವಾರದಲ್ಲಿದ್ದ ನಾನು ದೇವೇಗೌಡರ ಕುಟುಂಬದೊಂದಿಗೆ ನಿಕಟವಾದ ಒಡನಾಟ ಇಟ್ಟುಕೊಂಡವನಾಗಿ ಚೆನ್ನಮ್ಮನವರನ್ನು ಸಮೀಪದಿಂದ ಬಲ್ಲ
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ನಿಧನಕ್ಕೆ ಕಾಂಗ್ರೆಸ್ ಶಾಸಕ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ಧಾರೆ.ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನದಿಂದ ದುಃಖಿತನಾಗಿದ್ದೇನೆ. ಜನತಾ ಪರಿವಾರದಲ್ಲಿದ್ದ ನಾನು ದೇವೇಗೌಡರ ಕುಟುಂಬದೊಂದಿಗೆ ನಿಕಟವಾದ ಒಡನಾಟ ಇಟ್ಟುಕೊಂಡವನಾಗಿ ಚೆನ್ನಮ್ಮನವರನ್ನು ಸಮೀಪದಿಂದ ಬಲ್ಲವನು.ಚನ್ನಮ್ಮನವರು ತಮ್ಮ ಜೀವನದಲ್ಲಿ ಎದುರಾದ ಕಷ್ಟ - ನೋವುಗಳಿಂದ ಕುಗ್ಗದೆ, ಎಲ್ಲವನ್ನೂ ಧೈರ್ಯದಿಂದ ಎದುರಿಸಿದ್ದ ಗಟ್ಟಿಗಿತ್ತಿ. ದೇವೇಗೌಡರ ರಾಜಕೀಯ ಜೀವನದ ಏಳುಬೀಳಿನ ನಡುವೆ ದೊಡ್ಡ ಕುಟುಂಬವನ್ನು ಪೊರೆಯುತ್ತಾ ಬಂದ ಅವರು ಒಬ್ಬ ಆದರ್ಶ ಗೃಹಿಣಿಯಾಗಿದ್ದರು.ಮಾಜಿ ಪ್ರಧಾನಿಗಳ ಮಡದಿಯಾಗಿದ್ದರೂ ಯಾವ ಹಮ್ಮು ಬಿಮ್ಮು ಇಲ್ಲದೆ ಎಲ್ಲರನ್ನೂ ಅಕ್ಕರೆಯಿಂದ ಕಾಣುತ್ತಿದ್ದ ಚೆನ್ನಮ್ಮನವರು, ಮಾದರಿ ಸತಿಯಾಗಿ ತುಂಬು ಜೀವನ ಸಾಗಿಸಿದವರು. ದೀರ್ಘಕಾಲದ ಸಂಗಾತಿಯನ್ನು ಈ ಇಳಿವಯಸ್ಸಿನಲ್ಲಿ ಕಳೆದುಕೊಂಡ ದೇವೇಗೌಡರಿಗೆ ದು:ಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ. ಗೌಡರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಅವರ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ