ಮೀನುಗಾರಿಕೆ ಇಲಾಖೆಯಿಂದ ಸಲಕರಣೆ ವಿತರಣೆಗೆ ಅರ್ಜಿ ಆಹ್ವಾನ
ರಾಯಚೂರು: ಮೀನುಗಾರಿಕೆ ಇಲಾಖೆ ವತಿಯಿಂದ 2026-27ನೇ ಸಾಲಿನ ಜಿಲ್ಲಾ ಪಂಚಾಯಿತಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ಮೀನುಗಾರರಿಗೆ ಉಚಿತವಾಗಿ ವಿವಿಧ ಸಲಕರಣೆ ವಿತರಣೆ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಗಳ ವಿತರಣೆ ಹಾಗೂ ಮತ್ಸ್ಯ ವಾಹಿನಿ ಯೋಜನೆಯಡಿ ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ ಖರೀದಿಸಿದವ

ರಾಯಚೂರು: ಮೀನುಗಾರಿಕೆ ಇಲಾಖೆ ವತಿಯಿಂದ 2026-27ನೇ ಸಾಲಿನ ಜಿಲ್ಲಾ ಪಂಚಾಯಿತಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ಮೀನುಗಾರರಿಗೆ ಉಚಿತವಾಗಿ ವಿವಿಧ ಸಲಕರಣೆ ವಿತರಣೆ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಗಳ ವಿತರಣೆ ಹಾಗೂ ಮತ್ಸ್ಯ ವಾಹಿನಿ ಯೋಜನೆಯಡಿ ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ ಖರೀದಿಸಿದವರಿಗೆ ಸಹಾಯಧನ ನೀಡಲಾಗುವುದು. ಆಸಕ್ತರು ಅರ್ಜಿಯನ್ನು ಆಗಸ್ಟ್ 25ರೊಳಗಾಗಿ ವೆಬ್ಸೈಟ್ raichur.nic.in ಮೂಲಕ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಉಪ ನಿರ್ದೇಶಕರು ಅಥವಾ ರಾಯಚೂರು, ಲಿಂಗಸೂಗೂರು, ಸಿಂಧನೂರಿಗೆ ಸಂಬಂಧಿಸಿದ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260718-32-516229808
Read the complete story at Prajavani