ಜಂತರ್ ಮಂತರ್ನಲ್ಲಿ ಅಭಿಜಿತ್ ದೀಪ್ಕೆ ಮೇಲೆ ಶಾಯಿ ಎರಚಿದ ಮಹಿಳೆ
ನವದೆಹಲಿ: ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರ ಮೇಲೆ ಮಹಿಳೆಯೊಬ್ಬರು ನೀಲಿ ಶಾಯಿಯನ್ನು ಎರಚಿರುವ ಘಟನೆ ನಡೆದಿದೆ. ಸೊನಮ್ ವಾಂಗ್ಚೂಕ್ ಅವರನ್ನು ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿದ ನಾಟಕೀಯ ಬೆಳವಣಿಗೆ ನಡೆದ ಕೆಲವೇ ಗಂಟೆಗಳ ನಂತರ, ಅಭಿಜಿತ್ ದೀಪ್ಕೆ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಈ ಘ

ನವದೆಹಲಿ: ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರ ಮೇಲೆ ಮಹಿಳೆಯೊಬ್ಬರು ನೀಲಿ ಶಾಯಿಯನ್ನು ಎರಚಿರುವ ಘಟನೆ ನಡೆದಿದೆ. ಸೊನಮ್ ವಾಂಗ್ಚೂಕ್ ಅವರನ್ನು ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿದ ನಾಟಕೀಯ ಬೆಳವಣಿಗೆ ನಡೆದ ಕೆಲವೇ ಗಂಟೆಗಳ ನಂತರ, ಅಭಿಜಿತ್ ದೀಪ್ಕೆ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಈ ಘಟನೆ ಜರುಗಿದೆ. ಈ ಘಟನೆಯಿಂದಾಗಿ ಕಾರ್ಯಕ್ರಮದಲ್ಲಿ ಸ್ವಲ್ಪ ಕಾಲ ಅಡಚಣೆ ಉಂಟಾಯಿತು. ಇದೇ ವೇಳೆ ಸಿಜೆಪಿ ಬೆಂಬಲಿಗರು ವೇದಿಕೆಯತ್ತ ಧಾವಿಸಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಯಿತು. ಈ ಘಟನೆಯ ವಿಡಿಯೊವನ್ನು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅಭಿಜಿತ್ ದೀಪ್ಕೆ, ‘ನೀಲಿ ಬಣ್ಣವು ನನ್ನ ಬಣ್ಣ, ಜೈ ಭೀಮ್’ ಎಂದು ಬರೆದುಕೊಂಡಿದ್ದಾರೆ. Blue is my colour… Jai Bhim! pic.twitter.com/SItr64em29— Abhijeet Dipke (@abhijeet_dipke) July 18, 2026 ಶಾಯಿ ಎರಚಿದ ಮಹಿಳೆಯ ಗುರುತು ಮತ್ತು ಈ ಕೃತ್ಯದ ಹಿಂದಿನ ಉದ್ದೇಶ ತಕ್ಷಣಕ್ಕೆ ತಿಳಿದುಬಂದಿಲ್ಲ. ಆದಾಗ್ಯೂ, ಆಕೆಯನ್ನು ವಶಕ್ಕೆ ಪಡೆಯಲಾಗಿದೆ. ಈ ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ನೀಟ್ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ 20 ದಿನಗಳ ಕಾಲ ನಡೆಸಿದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ ವೇಳೆ ವಾಂಗ್ಚೂಕ್ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಅವರನ್ನು ಸಫ್ದರ್ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಪೊಲೀಸರು ಸೊನಮ್ ವಾಂಗ್ಚೂಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಭಿಜಿತ್ ದೀಪ್ಕೆ ಅವರು ಆರೋಪಿಸಿದ್ದಾರೆ.