ಚಿತ್ತಾಪುರ: ಹಾವು ಕಚ್ಚಿ ಬಾಲಕ ಸಾವು
ಚಿತ್ತಾಪುರ (ಕಲಬುರಗಿ ಜಿಲ್ಲೆ): ಕಣಕಿ (ದನಗಳ ಮೇವು) ತರಲೆಂದು ಹೊಲಕ್ಕೆ ಹೋಗಿದ್ದ ಸಮಯದಲ್ಲಿ ಹಾವು ಕಚ್ಚಿ ಬಾಲಕನೊಬ್ಬ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಶುಕ್ರವಾರ ಸಾಯಂಕಾಲ ಜರುಗಿದೆ.ಗ್ರಾಮದ ಸಾಬಣ್ಣಾ ಬಸವರಾಜ (16) ಸಾವಿಗೀಡಾದ ಬಾಲಕ. ಹಾವು ಕಚ್ಚಿದ ವಿಷಯ ತಿಳಿಯುತ್ತಿದ್ದಂತೆ ಪಾಲಕರು ಸಮೀಪದ ವಾಡಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡ
ಚಿತ್ತಾಪುರ (ಕಲಬುರಗಿ ಜಿಲ್ಲೆ): ಕಣಕಿ (ದನಗಳ ಮೇವು) ತರಲೆಂದು ಹೊಲಕ್ಕೆ ಹೋಗಿದ್ದ ಸಮಯದಲ್ಲಿ ಹಾವು ಕಚ್ಚಿ ಬಾಲಕನೊಬ್ಬ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಶುಕ್ರವಾರ ಸಾಯಂಕಾಲ ಜರುಗಿದೆ.ಗ್ರಾಮದ ಸಾಬಣ್ಣಾ ಬಸವರಾಜ (16) ಸಾವಿಗೀಡಾದ ಬಾಲಕ. ಹಾವು ಕಚ್ಚಿದ ವಿಷಯ ತಿಳಿಯುತ್ತಿದ್ದಂತೆ ಪಾಲಕರು ಸಮೀಪದ ವಾಡಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಚಿತ್ತಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯತಾದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆ ಪಿಎಸ್ಐ ಮಂಜುನಾಥ ರೆಡ್ಡಿ ಅವರು ರಾತ್ರಿಯೇ ಆಸ್ಪತ್ರೆಗೆ ತೆರಳಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಪಪರೀಕ್ಷೆ ಮಾಡಿಸಿ, ಶವವನ್ನು ಬಾಲಕನ ಕುಟುಂಬಕ್ಕೆ ಒಪ್ಪಿಸಿದ್ದಾರೆ.
Read the complete story at Prajavani