ದೇವೇಗೌಡರ ಪತ್ನಿ ಚನ್ನಮ್ಮ ನಿಧನಕ್ಕೆ ಪ್ರಧಾನಿ, ಮುಖ್ಯಮಂತ್ರಿ ಸೇರಿ ಹಲವರ ಸಂತಾಪ
ಬೆಂಗಳೂರು: ಮಾಜಿ ಪ್ರಧಾನಮಂತ್ರಿ ದೇವೇಗೌಡರ ಪತ್ನಿ ಶ್ರೀಮತಿ ಚನ್ನಮ್ಮ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.ಮಾಜಿ ಪ್ರಧಾನಮಂತ್ರಿಗಳಾದ ಎಚ್.ಡಿ ದೇವೇಗೌಡರ ಧರ್ಮಪತ್ನಿ, ಮಾತೃ ಸ್ವರೂಪಿ ಶ್ರೀಮತಿ

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ದೇವೇಗೌಡರ ಪತ್ನಿ ಶ್ರೀಮತಿ ಚನ್ನಮ್ಮ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.ಮಾಜಿ ಪ್ರಧಾನಮಂತ್ರಿಗಳಾದ ಎಚ್.ಡಿ ದೇವೇಗೌಡರ ಧರ್ಮಪತ್ನಿ, ಮಾತೃ ಸ್ವರೂಪಿ ಶ್ರೀಮತಿ ಚನ್ನಮ್ಮ ಅವರು ನಿಧನರಾಗಿರುವ ವಿಷಯ ಅತೀವ ದುಃಖವನ್ನುಂಟು ಮಾಡಿದೆ. ಚನ್ನಮ್ಮ ಅವರು ಅಪಾರ ದೈವಭಕ್ತೆಯಾಗಿದ್ದರು. ಅವರು ಆಸ್ಪತ್ರೆಯಿಂದ ಗುಣಮುಖರಾಗಿ ವಾಪಸ್ಸು ಬರುತ್ತಾರೆಂದು ಎಲ್ಲರೂ ನಂಬಿಕೆ ಇಟ್ಟುಕೊಂಡಿದ್ದೆವು. ಆದರೆ, ಆ ನಂಬಿಕೆ ಸುಳ್ಳಾಗಿರುವುದಕ್ಕೆ ಬಹಳ ಬೇಸರವಾಗಿದೆ. ಪ್ರತಿ ಯಶಸ್ವಿ ಪುರುಷನ ಹಿಂದೆ ಮಹಿಳೆ ಇದ್ದೇ ಇರುತ್ತಾಳೆ ಎನ್ನುತ್ತಾರೆ. ಅದರಂತೆ ಚೆನ್ನಮ್ಮನವರು ದೇವೇಗೌಡರ ಪ್ರತಿ ಯಶಸ್ಸಿನ ಹಿಂದೆ ಹಾಗೂ ರಾಜಕೀಯದ ಏಳು-ಬೀಳುಗಳಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ಮನೆಯನ್ನು ಜವಾಬ್ದಾರಿಯಿಂದ ನೋಡಿಕೊಳ್ಳುವ ಮೂಲಕ ಅವರು ಗೌಡರ ಬದುಕಿನ ನಿಜವಾದ ಶಕ್ತಿಯಾಗಿದ್ದರು. ಯಾವುದೇ ಪ್ರಚಾರ ಬಯಸದೆ ತೆರೆಮರೆಯಲ್ಲಿ ಇದ್ದರು. ಅವರ ಅಗಲಿಕೆ ಕುಟುಂಬಸ್ಥರಿಗೆ ಹಾಗೂ ಆಪ್ತರಿಗೆ ತುಂಬಲಾರದ ನಷ್ಟವಾಗಿದೆ. ಭಗವಂತ ಹಿರಿಯರ ಆತ್ಮಕ್ಕೆ ಚಿರಶಾಂತಿ ನೀಡಲಿ, ಕುಟುಂಬಸ್ಥರಿಗೆ, ಬಂಧು-ಬಳಗಕ್ಕೆ ದುಃಖವನ್ನು ಭರಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿ.ಕೆ, ಶಿವಕುಮಾರ್ ಎಕ್ಸ್ ಪೋಸ್ಟ್ನಲ್ಲಿ ಸಂತಾಪ ಸೂಚಿಸಿದ್ದಾರೆ. ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ ದೇವೇಗೌಡರ ಧರ್ಮಪತ್ನಿ, ಮಾತೃ ಸ್ವರೂಪಿ ಶ್ರೀಮತಿ ಚೆನ್ನಮ್ಮ ಅವರು ನಿಧನರಾಗಿರುವ ವಿಷಯ ಅತೀವ ದುಃಖವನ್ನುಂಟು ಮಾಡಿದೆ. ಶ್ರೀಮತಿ ಚೆನ್ನಮ್ಮ ಅವರು ಅಪಾರ ದೈವಭಕ್ತೆಯಾಗಿದ್ದರು. ಅವರು ಆಸ್ಪತ್ರೆಯಿಂದ ಗುಣಮುಖರಾಗಿ ವಾಪಸ್ಸು ಬರುತ್ತಾರೆಂದು ಎಲ್ಲರೂ ನಂಬಿಕೆ ಇಟ್ಟುಕೊಂಡಿದ್ದೆವು. ಆದರೆ ಆ ನಂಬಿಕೆ… pic.twitter.com/IzqbQalqNg— DK Shivakumar (@DKShivakumar) July 18, 2026 ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರ ಪತ್ನಿ ಶ್ರೀಮತಿ ಚೆನ್ನಮ್ಮನವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ತಮ್ಮ ವಿನಯ ಮತ್ತು ಸಮಾಜ ಸೇವೆಯ ಮೇಲಿನ ಬದ್ಧತೆಗಾಗಿ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು. ಈ ದುಃಖದ ಸಮಯದಲ್ಲಿ, ದೇವೇಗೌಡರು ಮತ್ತು ಅವರ ಇಡೀ ಕುಟುಂಬಕ್ಕೆ ನನ್ನ ಹೃದಯಪೂರ್ವಕ ಸಂತಾಪಗಳು. ಓಂ ಶಾಂತಿ ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.ಮಾಜಿ ಪ್ರಧಾನಮಂತ್ರಿ ಶ್ರೀ ದೇವೇಗೌಡ ಅವರ ಪತ್ನಿ ಶ್ರೀಮತಿ ಚೆನ್ನಮ್ಮನವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ತಮ್ಮ ವಿನಯ ಮತ್ತು ಸಮಾಜ ಸೇವೆಯ ಮೇಲಿನ ಬದ್ಧತೆಗಾಗಿ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು. ಈ ದುಃಖದ ಸಮಯದಲ್ಲಿ, ಶ್ರೀ ದೇವೇಗೌಡರು ಮತ್ತು ಅವರ ಇಡೀ ಕುಟುಂಬಕ್ಕೆ ನನ್ನ ಹೃದಯಪೂರ್ವಕ ಸಂತಾಪಗಳು. ಓಂ ಶಾಂತಿ.— Narendra Modi (@narendramodi) July 18, 2026 ಶ್ರೀಮತಿ ಚೆನ್ನಮ್ಮನವರ ನಿಧನದ ಸುದ್ದಿ ಕೇಳಿ ತೀವ್ರ ದುಃಖವಾಯಿತು. ಗೌರವಾನ್ವಿತ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು, ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹಾಗೂ ಅವರ ಕುಟುಂಬವರ್ಗಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳನ್ನು ಸಲ್ಲಿಸುತ್ತೇನೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ತೀವ್ರ ದುಃಖದ ಸಮಯದಲ್ಲಿ ಕುಟುಂಬಕ್ಕೆ ಸಾಂತ್ವನ ಮತ್ತು ಧೈರ್ಯ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಎಕ್ಸ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನಕ್ಕೆ ತೀವ್ರ ಸಂತಾಪಗಳು. ಅವರು ಕುಟುಂಬದ ಶಕ್ತಿ, ಘನತೆ ಮತ್ತು ಅಚಲ ಬದ್ಧತೆಯ ಸಾಕಾರಮೂರ್ತಿಯಾಗಿದ್ದರು; ಎಚ್. ಡಿ. ದೇವೇಗೌಡರ ದೀರ್ಘಕಾಲದ ಸಾರ್ವಜನಿಕ ಸೇವೆಯ ಹಾದಿಯಲ್ಲಿ ಬಲವಾದ ಆಧಾರಸ್ತಂಭವಾಗಿ ನಿಂತಿದ್ದರು. ಈ ಸಂದರ್ಭದಲ್ಲಿ ದೇವೇಗೌಡರು, ಎಚ್. ಡಿ. ಕುಮಾರಸ್ವಾಮಿ ಹಾಗೂ ಶೋಕತಪ್ತ ಕುಟುಂಬದ ಎಲ್ಲರಿಗೂ ನನ್ನ ಸಂತಾಪಗಳು. ಈ ತುಂಬಲಾರದ ನಷ್ಟವನ್ನು ಭರಿಸುವ ಶಕ್ತಿಯನ್ನು ದೇವರು ಕುಟುಂಬಕ್ಕೆ ನೀಡಲಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಕ್ಸ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ. Deepest condolences on the passing of Smt. Chennamma Deve Gowda, wife of former Prime Minister Shri H. D. Deve Gowda jiShe embodied quiet strength, grace and unwavering commitment to her family, standing as a pillar of support through Shri H. D. Deve Gowda ji's long years of…— Rajnath Singh (@rajnathsingh) July 18, 2026