ಕೆಪಿಎಸ್ಸಿ ಅಧ್ಯಕ್ಷ ಸಾಹುಕಾರ ಅಮಾನತು: ಸಂಪುಟ ಅಸ್ತು
ಬೆಂಗಳೂರು: ಪುತ್ರಿಗೆ ಸರ್ಕಾರಿ ಹುದ್ದೆ ಗಿಟ್ಟಿಸಿಕೊಳ್ಳಲು ಅಧಿಕಾರ ದುರುಪಯೋಗ, ಸ್ವಜನ ಪಕ್ಷಪಾತ ಎಸಗಿದ್ದಾರೆಂದು ಸಲ್ಲಿಕೆಯಾಗಿರುವ ದೂರು ಆಧರಿಸಿ ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಮಾನತು ಮಾಡಿರುವ ನಿರ್ಣಯಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.ಭಾನುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ

ಬೆಂಗಳೂರು: ಪುತ್ರಿಗೆ ಸರ್ಕಾರಿ ಹುದ್ದೆ ಗಿಟ್ಟಿಸಿಕೊಳ್ಳಲು ಅಧಿಕಾರ ದುರುಪಯೋಗ, ಸ್ವಜನ ಪಕ್ಷಪಾತ ಎಸಗಿದ್ದಾರೆಂದು ಸಲ್ಲಿಕೆಯಾಗಿರುವ ದೂರು ಆಧರಿಸಿ ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಮಾನತು ಮಾಡಿರುವ ನಿರ್ಣಯಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.ಭಾನುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ಸಾಹುಕಾರ ಅವರನ್ನು ರಾಜ್ಯಪಾಲರು ಅಮಾನತು ಮಾಡಿ ಹೊರಡಿಸಿರುವ ಆದೇಶದಲ್ಲಿರುವ ಎಲ್ಲ ಅಂಶಗಳನ್ನು ಪರಿಶೀಲಿಸಿದ್ದೇವೆ. ರಾಜ್ಯಪಾಲರು ತೆಗೆದುಕೊಂಡಿರುವ ಕ್ರಮ ಸರಿಯಾಗಿದೆ’ ಎಂದರು.‘ರಾಜ್ಯಪಾಲರು ನಿರ್ಣಯ ತೆಗೆದುಕೊಳ್ಳುವ ಮೊದಲು ಸಂಪುಟ ಸಭೆಯ ಅನುಮೋದನೆ ಪಡೆಯುವ ಅಗತ್ಯ ಇತ್ತೇ’ ಎಂಬ ಸುದ್ದಿಗಾರರ ಪ್ರಶ್ನೆಗೆ, ‘ಅವಶ್ಯಕತೆ ಇರಲಿಲ್ಲ. ಆದರೆ, ಯಾವುದೋ ಒಂದು ನ್ಯಾಯಾಲಯ ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದೆ. ಹೀಗಾಗಿ, ಸಂಪುಟ ಸಭೆಗೆ ಈ ವಿಷಯದ ಪ್ರಸ್ತಾವ ಮಂಡನೆಯಾಗಿತ್ತು’ ಎಂದರು.ಸಭೆಯ ಇತರ ನಿರ್ಣಯಗಳು*ರಾಜ್ಯದಲ್ಲಿ ಕೃಷಿ ಸೇವಾ ಸಲಹೆಗಳು, ಬೆಳೆ ಮೇಲ್ವಿಚಾರಣೆ, ಬೆಳೆ ಗುರುತಿಸುವಿಕೆ ರಿಮೋಟ್ ಸೆನ್ಸಿಂಗ್ ತಂತ್ರಜ್ಞಾನವನ್ನು 3 ವರ್ಷಗಳ ಅವಧಿಯಲ್ಲಿ ₹ 35.99 ಕೋಟಿ ವೆಚ್ಚದಲ್ಲಿ ಅಳವಡಿಸಲು ‘ಕರ್ನಾಟಕ ಅಗ್ರಿ ಟೆಕ್ ಮಿಷನ್–2026’ ಜಾರಿ* ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ಹಾಸ್ಟೆಲ್ಗಳಿಗೆ ₹ 29.98 ಕೋಟಿ ವೆಚ್ಚದಲ್ಲಿ 7,500 ಟೂ-ಟಯರ್ ಕಾಟ್ ಮತ್ತು 15 ಸಾವಿರ ಹಾಸಿಗೆ ಖರೀದಿ* ರಾಯಚೂರಿನ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಗೆ ಐದು ವರ್ಷದಲ್ಲಿ ₹12 ಕೋಟಿ ವೆಚ್ಚದಲ್ಲಿ ಕೃತಕ ಬುದ್ದಿಮತ್ತೆ ಶ್ರೇಷ್ಠತಾ ಕೇಂದ್ರ ಸ್ಥಾಪನೆ* ಬೆಂಗಳೂರಿನ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಎಂಬಿಬಿಎಸ್ ಮತ್ತು ಬಿಡಿಎಸ್ ವಿದ್ಯಾರ್ಥಿಗಳಿಗೆ ₹ 83.50 ಕೋಟಿ ವೆಚ್ಚದಲ್ಲಿ ಹಾಸ್ಟೆಲ್ ಕಟ್ಟಡ ನಿರ್ಮಾಣ* 2025-26ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕಲಬುರಗಿ ಜಿಲ್ಲೆಯಲ್ಲಿ ₹25 ಕೋಟಿ ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ* ಲೋಕಭವನ ಆವರಣದಲ್ಲಿ ₹ 27 ಕೋಟಿ ವೆಚ್ಚದಲ್ಲಿ ರಾಜ್ಯಪಾಲರ ಆಡಳಿತ ಕಚೇರಿ, ವಿಶೇಷ ಕಾರ್ಯದರ್ಶಿಯ ವಸತಿ ಗೃಹ ಮತ್ತು ಒಳಾಂಗಣ ಕ್ರೀಡಾಂಗಣ ನಿರ್ಮಾಣ ಕಾಮಗಾರಿ* 15 ಸಾವಿರ ಶಿಕ್ಷಕರ ನೇಮಕಾತಿಗೆ ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ* ಕಾರಂಜಾ ಬಲದಂಡೆ ಕಾಲುವೆಯ ಮುಖ್ಯ ಕಾಲುವೆ, ವಿತರಣಾ ಕಾಲುವೆಗಳನ್ನು ₹ 180 ಕೋಟಿ ವೆಚ್ಚದಲ್ಲಿ ಆಧುನೀಕರಣ* ಮೈಸೂರು ಜಿಲ್ಲೆಯ ನಂಜನಗೂಡು ನಗರ ವ್ಯಾಪ್ತಿಯಲ್ಲಿ ಕಪಿಲಾ ನದಿಗೆ ನಂಜನಗೂಡು ನಗರ ವ್ಯಾಪ್ತಿಯ ಮಲಿನ ನೀರು ಸೇರದಂತೆ ಹಾಗೂ ಪ್ರವಾಹ ತಡೆಯಲು ₹ 70 ಕೋಟಿ ವೆಚ್ಚದಲ್ಲಿ ಸರ್ಕಾರಿ ಅತಿಥಿ ಗೃಹದಿಂದ ಪರಶುರಾಮ ದೇವಸ್ಥಾನದವರೆಗೆ ನದಿ ಮುಂಭಾಗದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅನುಮೋದನೆ* ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿ ನೀರಾವರಿ ಜಲಮಂಡಳಿಯ 116 ಕೆರೆಗಳು ಹಾಗೂ ಗ್ರಾಯತ್ರಿ ಜಲಾಶಯದ ಕುಡಿಯುವ ನೀರು ತುಂಬಿಸುವ ಹಾಗೂ ಅಂತರ್ಜಲ ಅಭಿವೃದ್ಧಿಪಡಿಸುವ ₹ 244 ಕೋಟಿ ವೆಚ್ಚದ ಕಾಮಗಾರಿಗೆ ಒಪ್ಪಿಗೆ