ದೇವೇಗೌಡ ಪತ್ನಿ ಚನ್ನಮ್ಮ ನಿಧನ: ಹಾಸನದ ಹರದನಹಳ್ಳಿಯಲ್ಲಿ ಅಂತ್ಯಕ್ರಿಯೆ
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ (85) ಅವರು ಉಸಿರಾಟದ ತೊಂದರೆ ಮತ್ತು ಹೃದಯಾಘಾತದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ನಿಧನರಾದರು.ನಾಲ್ಕು ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯರ ತಂಡವು ಚಿಕಿತ್ಸೆ ನೀಡುತ್ತಿತ್ತು. ಆದರೆ, ಚಿಕಿತ್ಸೆಗೆ ಸ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ (85) ಅವರು ಉಸಿರಾಟದ ತೊಂದರೆ ಮತ್ತು ಹೃದಯಾಘಾತದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ನಿಧನರಾದರು.ನಾಲ್ಕು ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯರ ತಂಡವು ಚಿಕಿತ್ಸೆ ನೀಡುತ್ತಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಅವರು ನಿಧನರಾದರು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.ಪದ್ಮನಾಭನಗರದಲ್ಲಿರುವ ದೇವೇಗೌಡ ಅವರ ನಿವಾಸಕ್ಕೆ ಚನ್ನಮ್ಮ ಅವರ ಮೃತದೇಹವನ್ನು ಶನಿವಾರ ರಾತ್ರಿ ತರಲಾಗಿದ್ದು, ಭಾನುವಾರ ಅಲ್ಲಿಯೇ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುತ್ತದೆ. ಹಾಸನದ ಹೊಳೆನರಸೀಪುರದಲ್ಲಿರುವ ದೇವೇಗೌಡ ಅವರ ಸ್ವಗ್ರಾಮ ಹರದನಹಳ್ಳಿಗೆ ಒಯ್ಯಲಾಗುತ್ತದೆ. ಮಧ್ಯಾಹ್ನದ ನಂತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Read the complete story at Prajavani