ಅಜ್ಜಿ ಅಂತ್ಯಕ್ರಿಯೆಗೆ ಬರ್ತಾರಾ ಪ್ರಜ್ವಲ್ ರೇವಣ್ಣ?
ಬೆಂಗಳೂರು: ಅಜ್ಜಿ ಚೆನ್ನಮ್ಮ (Chennamma) ನಿಧನರಾಗಿರುವ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತುರ್ತು ಪೆರೋಲ್ ಕೋರಿ ಜೈಲಾಧಿಕಾರಿಗಳಿಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ. ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿದ್ದು, ಪರಪ್ಪನ ಅಗ್ರಹಾರ ಜೈಲಲ

ಬೆಂಗಳೂರು: ಅಜ್ಜಿ ಚೆನ್ನಮ್ಮ (Chennamma) ನಿಧನರಾಗಿರುವ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತುರ್ತು ಪೆರೋಲ್ ಕೋರಿ ಜೈಲಾಧಿಕಾರಿಗಳಿಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ. ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿದ್ದು, ಪರಪ್ಪನ ಅಗ್ರಹಾರ ಜೈಲಲ್ಲಿದ್ದಾರೆ. ಅಜ್ಜಿ ಚೆನ್ನಮ್ಮ ನಿಧನರಾಗಿದ್ದು, ಅಂತಿಮ ದರ್ಶನಕ್ಕೆ ಪೆರೋಲ್ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಆರಿತು ಗೌಡರ ಮನೆಯ ಮೌನದ ದೀಪ! ತುರ್ತು ಸಂದರ್ಭಗಳಲ್ಲಿ ಪೆರೋಲ್ ನೀಡಲು ಕಾನೂನಿನಲ್ಲಿ ಅವಕಾಶ ಇದೆ. ಈ ಬಗ್ಗೆ ಪರಪ್ಪನ ಅಗ್ರಹಾರದ ಕೇಂದ್ರ ಕಾರಗೃಹದ ಮುಖ್ಯ ಅಧೀಕ್ಷಕರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ (H.D.Deve Gowda) ಪತ್ನಿ ಚೆನ್ನಮ್ಮ ಚಿಕಿತ್ಸೆ ಫಲಿಸದೇ ಶನಿವಾರ ಆಸ್ಪತ್ರೆಯಲ್ಲಿ ನಿಧನರಾದರು. ಚೆನ್ನಮ್ಮ ಅವರ ಅಂತ್ಯಕ್ರಿಯೆ ಸೋಮವಾರ ದೇವೇಗೌಡರ ಹುಟ್ಟೂರಿನಲ್ಲಿ ನಡೆಯಲಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಬೆನ್ನುತಟ್ಟಿ ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ