ರಜೌರಿಯಲ್ಲಿ ಹಠಾತ್ ಪ್ರವಾಹ – ನೂರಾರು ಕುಟುಂಬಗಳ ಸ್ಥಳಾಂತರ, ನೀರಿನಲ್ಲಿ ಕೊಚ್ಚಿಹೋದ ವಾಹನಗಳು
ಶ್ರೀನಗರ: ಜಮ್ಮು-ಕಾಶ್ಮೀರದ (Jammu and Kashmir) ಗಡಿ ಜಿಲ್ಲೆ ರಜೌರಿಯಲ್ಲಿ (Rajouri) ಶನಿವಾರದಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಹಠಾತ್ ಪ್ರವಾಹ (Flash Flood) ಉಂಟಾಗಿದ್ದು, ಇಡೀ ಪಟ್ಟಣವೇ ಜಲಾವೃತಗೊಂಡಿದೆ. ತಗ್ಗು ಪ್ರದೇಶಗಳಿಗೆ ಪ್ರವಾಹದ ನೀರು ಏಕಾಏಕಿ ನುಗ್ಗಿದ ಪರಿಣಾಮ ನೂರಾರು ಕುಟುಂಬಗಳು ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ತೆರಳಬೇಕಾದ ಪ

ಶ್ರೀನಗರ: ಜಮ್ಮು-ಕಾಶ್ಮೀರದ (Jammu and Kashmir) ಗಡಿ ಜಿಲ್ಲೆ ರಜೌರಿಯಲ್ಲಿ (Rajouri) ಶನಿವಾರದಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಹಠಾತ್ ಪ್ರವಾಹ (Flash Flood) ಉಂಟಾಗಿದ್ದು, ಇಡೀ ಪಟ್ಟಣವೇ ಜಲಾವೃತಗೊಂಡಿದೆ. ತಗ್ಗು ಪ್ರದೇಶಗಳಿಗೆ ಪ್ರವಾಹದ ನೀರು ಏಕಾಏಕಿ ನುಗ್ಗಿದ ಪರಿಣಾಮ ನೂರಾರು ಕುಟುಂಬಗಳು ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಸಂಪೂರ್ಣ ನೀರಿನಿಂದ ಆವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶನಿವಾರ ಸಂಜೆ ಆರಂಭವಾದ ಮಳೆ ರಾತ್ರಿಯಿಡೀ ನಿರಂತರವಾಗಿ ಸುರಿದ ಪರಿಣಾಮ ರಾಜೌರಿಯ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯಲಾರಂಭಿಸಿದವು. ದರ್ಹಾಲಿ, ಖಂಡ್ಲಿ, ಸುಕ್ತೋಹ್ ಹಾಗೂ ಜಮೋಲಾ ಸೇರಿದಂತೆ ಎಲ್ಲ ಪ್ರಮುಖ ನದಿಗಳು ಉಕ್ಕಿ ಹರಿದ ಪರಿಣಾಮ ಪಟ್ಟಣದ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಇದನ್ನೂ ಓದಿ: ಬೆಂಗಳೂರಿಂದ ಹೊಳೆನರಸೀಪುರಕ್ಕೆ ಚೆನ್ನಮ್ಮ ಪಾರ್ಥಿವ ಶರೀರ ಅಂತಿಮ ಯಾತ್ರೆ – ಇಲ್ಲಿದೆ ಮಾರ್ಗದ ವಿವರ ಬೆಲಾ ಕಾಲೋನಿ ಸಮೀಪ ದರ್ಹಾಲಿ ನದಿಯ ಪ್ರವಾಹ ತಡೆಗೋಡೆ ಒಡೆದು ಅಪಾರ ಪ್ರಮಾಣದ ನೀರು ಹೊಸ ಬಸ್ ನಿಲ್ದಾಣಕ್ಕೆ ನುಗ್ಗಿತು. ಈ ಪರಿಣಾಮ ಅಲ್ಲಿದ್ದ ಡಜನ್ಗಟ್ಟಲೆ ಕಾರುಗಳು, ಬೈಕ್ಗಳು ಹಾಗೂ ಇತರೆ ವಾಹನಗಳು ಪ್ರವಾಹದ ರಭಸಕ್ಕೆ ಕೊಚ್ಚಿಹೋಗಿದ್ದು, ಹಲವು ವಾಹನಗಳು ನೀರಿನಲ್ಲಿ ಸಂಪೂರ್ಣ ಮುಳುಗಿವೆ. ಇದನ್ನೂ ಓದಿ: SIR ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಹೃದಯಾಘಾತದಿಂದ ಸಾವು An intense spell of rain lashed Rajouri between 1:00 AM and 6:00 AM, triggering flash floods in several areas. The flooding reportedly caused significant damage, including the loss of dozens of vehicles and damage to several structures. pic.twitter.com/WVu2sISRsK — Kashmir Weather (@Kashmir_Weather) July 19, 2026 ಅಬ್ದುಲ್ಲಾ ಸೇತುವೆ ಸಮೀಪದ ಕೊಳಗೇರಿ ಪ್ರದೇಶಕ್ಕೂ ಪ್ರವಾಹದ ನೀರು ನುಗ್ಗಿದ ಪರಿಣಾಮ 50ಕ್ಕೂ ಹೆಚ್ಚು ಕುಟುಂಬಗಳು ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಂಡಿವೆ. ಮನೆಗಳು, ರಸ್ತೆಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದ್ದು, ಜನರು ಅಗತ್ಯ ವಸ್ತುಗಳನ್ನು ಕೂಡ ತೆಗೆದುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. ಇದನ್ನೂ ಓದಿ: FIFA: ಒಂದೇ ಪಂದ್ಯದಲ್ಲಿ ದಾಖಲೆಯ 10 ಗೋಲ್ – ಫ್ರಾನ್ಸ್ ಮಣಿಸಿ 3ನೇ ಸ್ಥಾನಕ್ಕೆ ತೃಪ್ತಿಪಟ್ಟ ಇಂಗ್ಲೆಂಡ್ ತಾರಿಕ್ ಸೇತುವೆ ಬಳಿಯ ಪ್ರದೇಶಗಳಿಗೂ ಪ್ರವಾಹದ ನೀರು ನುಗ್ಗಿದ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿಗೆ ನಿರಂತರವಾಗಿ ತುರ್ತು ಕರೆಗಳು ಬಂದವು. ತಕ್ಷಣ ಕಾರ್ಯಾಚರಣೆ ಆರಂಭಿಸಿದ ತಂಡಗಳು ನದಿಯ ದಡದಲ್ಲಿದ್ದ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯ ಆಡಳಿತ, ಪೊಲೀಸರು ಹಾಗೂ ರಕ್ಷಣಾ ಮತ್ತು ಪರಿಹಾರ ತಂಡಗಳು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಸಂತ್ರಸ್ತ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವುದರ ಜೊತೆಗೆ ಹಾನಿಯ ಪ್ರಮಾಣವನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಗೌಡರಿಗಾಗಿ ಊಟ ಮಾಡದೇ ಕಾಯುತ್ತಿದ್ರು – ಅತ್ತೆ ನೆನೆದು ಡಾ.ಮಂಜುನಾಥ್ ಭಾವುಕ ನಮ್ಮ ತಂಡಗಳು ಬಂದಿರುವ ಬಹುತೇಕ ಎಲ್ಲಾ ಎಸ್ಒಎಸ್ ಕರೆಗಳಿಗೆ ತಕ್ಷಣ ಸ್ಪಂದಿಸುತ್ತಿವೆ. ಈ ಹಂತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಂತೆ ತಡೆಯುವುದು ನಮ್ಮ ಮೊದಲ ಆದ್ಯತೆಯಾಗಿದೆ. ಆಸ್ತಿಪಾಸ್ತಿಗೆ ಸಾಕಷ್ಟು ಹಾನಿಯಾಗಿದೆ. ಆದರೆ ಪ್ರವಾಹದ ನೀರು ಇಳಿದ ಬಳಿಕವೇ ನಷ್ಟದ ನಿಖರ ಪ್ರಮಾಣ ತಿಳಿಯಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಚೆನ್ನಮ್ಮ ನಿಧನ – ದೇವೇಗೌಡರಿಗೆ ಫೋನ್ ಕರೆ ಮಾಡಿ ಪ್ರಧಾನಿ ಮೋದಿ ಸಂತಾಪ ಹವಾಮಾನ ಇಲಾಖೆ ಜುಲೈ 23ರವರೆಗೆ ಜಮ್ಮು-ಕಾಶ್ಮೀರದಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಪೊಲೀಸರು ನದಿದಡ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಧ್ವನಿವರ್ಧಕಗಳ ಮೂಲಕ ಎಚ್ಚರಿಕೆ ನೀಡುತ್ತಿದ್ದಾರೆ. ಅಪಾಯದ ಪ್ರದೇಶಗಳಿಂದ ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡಲಾಗಿದೆ. ಇದನ್ನೂ ಓದಿ: ಅಜ್ಜಿ ಅಂತ್ಯಕ್ರಿಯೆಗೆ ಬರ್ತಾರಾ ಪ್ರಜ್ವಲ್ ರೇವಣ್ಣ? ಜಿಲ್ಲಾಡಳಿತವೂ ಪ್ರವಾಹ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕಂಟ್ರೋಲ್ ರೂಂಗಳನ್ನು ಸ್ಥಾಪಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ರಾಜೌರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಫ್ತಿಖಾರ್ ಅಹ್ಮದ್ ಅವರು ಜಮ್ಮುವಿನಲ್ಲಿ ನಡೆಯಬೇಕಿದ್ದ ಪಕ್ಷದ ಪ್ರತಿಭಟನಾ ಕಾರ್ಯಕ್ರಮವನ್ನು ರದ್ದುಪಡಿಸಿ ನೇರವಾಗಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಈ ಭೀಕರ ಪ್ರವಾಹದಿಂದ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಪಾಸ್ತಿಗೆ ಅಪಾರ ಹಾನಿಯಾಗಿದೆ. ಸಂತ್ರಸ್ತ ಕುಟುಂಬಗಳಿಗೆ ಜಿಲ್ಲಾಡಳಿತ ತಕ್ಷಣ ಪರಿಹಾರ ಹಾಗೂ ಪುನರ್ವಸತಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಆರಿತು ಗೌಡರ ಮನೆಯ ಮೌನದ ದೀಪ! ಪ್ರಸ್ತುತ ರಾಜೌರಿ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ನದಿಗಳ ನೀರಿನ ಮಟ್ಟ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಜನರು ಅನಗತ್ಯವಾಗಿ ನದಿಗಳು, ಹೊಳೆಗಳು ಹಾಗೂ ತಗ್ಗು ಪ್ರದೇಶಗಳತ್ತ ತೆರಳದಂತೆ ಆಡಳಿತ ಎಚ್ಚರಿಕೆ ನೀಡಿದ್ದು, ಪರಿಸ್ಥಿತಿಯ ಮೇಲೆ ನಿರಂತರ ನಿಗಾ ವಹಿಸಲಾಗಿದೆ. ಇದನ್ನೂ ಓದಿ: ಬೆನ್ನುತಟ್ಟಿ ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ