ಪ್ರೊಬೆಷನರಿ IPS ಅಧಿಕಾರಿಯ ಖಾಸಗಿ ವಿಡಿಯೊ ಚಿತ್ರೀಕರಿಸಿ ಲೈಂಗಿಕ ಕಿರುಕುಳ
ಹೈದರಾಬಾದ್: ಪ್ರೊಬೆಷನರಿ ಮಹಿಳಾ ಐಪಿಎಸ್ ಅಧಿಕಾರಿಯ ಖಾಸಗಿ ವಿಡಿಯೊ ಚಿತ್ರೀಕರಿಸಿ ಲೈಂಗಿಕ ಕಿರುಕುಳ ನೀಡಿ, ಬೆದರಿಕೆಯೊಡ್ಡಿದ ಆರೋಪ ಎದುರಿಸುತ್ತಿದ್ದ ಮತ್ತೊಬ್ಬರ ಪ್ರೊಬೆಷನರಿ ಅಧಿಕಾರಿ ಸೋಮವಾರ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.ಆರೋಪಿ ಹಾಗೂ ಸಂತ್ರಸ್ತೆ ಇಬ್ಬರೂ, ಇಲ್ಲಿನ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀ

ಹೈದರಾಬಾದ್: ಪ್ರೊಬೆಷನರಿ ಮಹಿಳಾ ಐಪಿಎಸ್ ಅಧಿಕಾರಿಯ ಖಾಸಗಿ ವಿಡಿಯೊ ಚಿತ್ರೀಕರಿಸಿ ಲೈಂಗಿಕ ಕಿರುಕುಳ ನೀಡಿ, ಬೆದರಿಕೆಯೊಡ್ಡಿದ ಆರೋಪ ಎದುರಿಸುತ್ತಿದ್ದ ಮತ್ತೊಬ್ಬರ ಪ್ರೊಬೆಷನರಿ ಅಧಿಕಾರಿ ಸೋಮವಾರ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.ಆರೋಪಿ ಹಾಗೂ ಸಂತ್ರಸ್ತೆ ಇಬ್ಬರೂ, ಇಲ್ಲಿನ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದರು.ಆರೋಪಿಯು ಸ್ನೇಹಿತನ ಅಪಾರ್ಟ್ಮೆಂಟ್ಗೆ ತೆರಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕೃತ ಮೂಲಗಳು ಖಚಿತಪಡಿಸಿವೆ.ಡಾ. ರಾಜ್ಕುಮಾರ್ ಕುಟುಂಬದ ಜೊತೆ ಚನ್ನಮ್ಮ.. ಅಪರೂಪದ ಚಿತ್ರಗಳುದುರ್ಬಲ ಮುಂಗಾರು, ಪಶ್ಚಿಮ ಏಷ್ಯಾ ಸಂಘರ್ಷ: ಭಾರತದ ಆರ್ಥಿಕತೆಗೆ 'ಉಭಯ ಸಂಕಟ' ಪ್ರಕರಣದ ಹಿನ್ನೆಲೆ ಏನು?30 ವರ್ಷದ ಮಹಿಳಾ ತರಬೇತಿ ಐಪಿಎಸ್ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಜುಲೈ 18ರಂದು ಅತ್ತಾಪುರ ಪೊಲೀಸ್ ಠಾಣೆಯಲ್ಲಿ ಆರೋಪಿ ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ದೂರಿನಲ್ಲಿ ಮಹಿಳಾ ಅಧಿಕಾರಿ ಗಂಭೀರ ಆರೋಪಗಳನ್ನು ಮಾಡಿದ್ದಾರೆಜೂನ್ 23ರಿಂದ ಲೈಂಗಿಕವಾಗಿ ನಿಂದಿಸುವ ಸಂದೇಶಗಳನ್ನು ಕಳುಹಿಸಲಾಗುತ್ತಿತ್ತು. ಅಕಾಡೆಮಿಯಲ್ಲಿ ಇತರ ಸ್ನೇಹಿತರ ಮುಂದೆ ತನ್ನ ವಿರುದ್ಧ ಅವಹೇಳನಕಾರಿ ಕಾಮೆಂಟ್ಗಳನ್ನು ಮಾಡಲಾಗುತ್ತಿತ್ತು.ಜುಲೈ 9 ರಂದು ಆರೋಪಿಯು ತನ್ನನ್ನು ಬಲವಂತವಾಗಿ ಕೊಠಡಿಗೆ ಎಳೆದೊಯ್ದು, ಕೂದಲನ್ನು ಹಿಡಿದು ಉಸಿರುಗಟ್ಟಿಸಲು ಯತ್ನಿಸಿದ್ದಲ್ಲದೆ, ಕುತ್ತಿಗೆಗೆ ಚಾಕು ಇಟ್ಟು ಬೆದರಿಕೆ ಹಾಕಿದ್ದನು. ಜುಲೈ 10ರಂದು ಮತ್ತೆ ದೈಹಿಕವಾಗಿ ಹಲ್ಲೆ ನಡೆಸಿದ್ದನು.ಸಿಜೆಪಿ ಪ್ರತಿಭಟನೆ: ಉಪವಾಸ ಅಂತ್ಯಗೊಳಿಸಿದ ಅಭಿಜಿತ್ ದೀಪ್ಕೆPHOTOS: ಹೊಸ ರೆಸಾರ್ಟ್ನಲ್ಲಿ ನಟಿ ಸಪ್ತಮಿ ಗೌಡ ಕುಟುಂಬದ ಗೃಹ ಪ್ರವೇಶದ ಸಂಭ್ರಮ ತನ್ನ ಒಪ್ಪಿಗೆಯಿಲ್ಲದೆ ಖಾಸಗಿ ವಿಡಿಯೊ ರೆಕಾರ್ಡ್ ಮಾಡಿ, ಬ್ಲ್ಯಾಕ್ಮೇಲ್ ಮಾಡುವ ಉದ್ದೇಶದಿಂದ ಅದನ್ನು ತನ್ನ ಪತಿಗೆ ಕಳುಹಿಸಿದ್ದಾಗಿ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಮಹಿಳೆಯ ದೂರಿನ ಮೇರೆಗೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಐಪಿಎಸ್ ತರಬೇತಿ ನಿರತ ಅಧಿಕಾರಿ ಅಕಾಡೆಮಿಯಿಂದ ಹೊರನಡೆದಿದ್ದರು. ಇವರು ಈ ಹಿಂದೆ ಆಂಧ್ರಪ್ರದೇಶದಲ್ಲಿ ಕಾನ್ಸ್ಟೆಬಲ್ ಆಗಿ ಸೇವೆ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ. ತನಿಖೆಯ ಭಾಗವಾಗಿ ಆರೋಪಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.