ಕಾರ್ಮಿಕರ ಕಲ್ಯಾಣ ಮಂಡಳಿ ಸೌಲಭ್ಯ ಪಡೆಯಲು ಸಲಹೆ
ಕೋಲಾರ: ಕಟ್ಟಡ ಕಾರ್ಮಿಕರು ಸರ್ಕಾರದ ಹಾಗೂ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ದೊರೆಯುವ ಹೆರಿಗೆ ಸಹಾಯಧನ, ಮಕ್ಕಳ ಪೋಷಣೆ, ಶಿಕ್ಷಣ, ವೈದ್ಯಕೀಯ ಸೇರಿದಂತೆ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಐಎನ್ಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ಮನವಿ ಮಾಡಿದರು.ನಗರದ ಕೋರ್ಟ್ ಸರ್ಕಲ್ ಬಳಿಯ ಜಿಲ್ಲಾ ಕಟ್ಟಡ ಕಾರ್ಮಿಕರ

ಕೋಲಾರ: ಕಟ್ಟಡ ಕಾರ್ಮಿಕರು ಸರ್ಕಾರದ ಹಾಗೂ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ದೊರೆಯುವ ಹೆರಿಗೆ ಸಹಾಯಧನ, ಮಕ್ಕಳ ಪೋಷಣೆ, ಶಿಕ್ಷಣ, ವೈದ್ಯಕೀಯ ಸೇರಿದಂತೆ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಐಎನ್ಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ಮನವಿ ಮಾಡಿದರು.ನಗರದ ಕೋರ್ಟ್ ಸರ್ಕಲ್ ಬಳಿಯ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಕಚೇರಿಯಲ್ಲಿ ಕಟ್ಟಡ ನಿರ್ಮಾಣದ ಪಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಿ ಮಾತನಾಡಿದರು.ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿದರೆ ಈ ಸೌಲಭ್ಯ ಪಡೆಯಬಹುದು. ಸಂಘದ ಕಚೇರಿಯಲ್ಲಿ ಮಾಹಿತಿ ಪಡೆಯಬಹುದು ಎಂದರು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260720-18-191759072
Read the complete story at Prajavani