ಚಿ.ನಾ. ಹಳ್ಳಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪೂರ್ಣ
ಚಿಕ್ಕನಾಯಕನಹಳ್ಳಿ: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಅಂತಿಮ ಹಂತ ತಲುಪಿದ್ದು, ಶನಿವಾರದ ವೇಳೆಗೆ ಕ್ಷೇತ್ರದಾದ್ಯಂತ ಶೇಕಡ 100ರಷ್ಟು ಗಣತಿ ನಮೂನೆಗಳನ್ನು ವಿತರಿಸಲಾಗಿದೆ ಎಂದು ತಹಶೀಲ್ದಾರ್ ಮಮತಾ ತಿಳಿಸಿದರು.ಕ್ಷೇತ್ರ ವ್ಯಾಪ್ತಿಯಲ್ಲಿರುವ ಒಟ್ಟು 2,20,625 ಮತದಾರರ ಮನೆಮನೆಗೂ ಬೂತ್ ಮಟ್ಟದ ಅಧಿಕಾರಿಗಳ ಮೂಲಕ ಗಣತಿ ನಮೂನೆಗಳನ್ನು ವಿತರಿಸುವ ಪ್ರಕ್ರಿಯೆ ಪೂರ್ಣಗೊಂಡಿ

ಚಿಕ್ಕನಾಯಕನಹಳ್ಳಿ: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಅಂತಿಮ ಹಂತ ತಲುಪಿದ್ದು, ಶನಿವಾರದ ವೇಳೆಗೆ ಕ್ಷೇತ್ರದಾದ್ಯಂತ ಶೇಕಡ 100ರಷ್ಟು ಗಣತಿ ನಮೂನೆಗಳನ್ನು ವಿತರಿಸಲಾಗಿದೆ ಎಂದು ತಹಶೀಲ್ದಾರ್ ಮಮತಾ ತಿಳಿಸಿದರು.ಕ್ಷೇತ್ರ ವ್ಯಾಪ್ತಿಯಲ್ಲಿರುವ ಒಟ್ಟು 2,20,625 ಮತದಾರರ ಮನೆಮನೆಗೂ ಬೂತ್ ಮಟ್ಟದ ಅಧಿಕಾರಿಗಳ ಮೂಲಕ ಗಣತಿ ನಮೂನೆಗಳನ್ನು ವಿತರಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಮನೆ, ಮನೆ ಸಮೀಕ್ಷೆ ಸಂದರ್ಭದಲ್ಲಿ ಮೃತಪಟ್ಟವರ, ಕಾಯಂ ಆಗಿ ವಲಸೆ ಹೋದವರ ಹಾಗೂ ಅನರ್ಹ ಮತದಾರರ ಹೆಸರುಗಳನ್ನು ನಿಯಮಾನುಸಾರ ಮತದಾರರ ಪಟ್ಟಿಯಿಂದ ಕೈಬಿಡಲಾಗುತ್ತಿದೆ. ಮುಂಬರುವ ಚುನಾವಣೆಗಳ ದೃಷ್ಟಿಯಿಂದ ಪಾರದರ್ಶಕ ಹಾಗೂ ದೋಷಮುಕ್ತ ಮತದಾರರ ಪಟ್ಟಿ ಸಿದ್ಧಪಡಿಸುವುದು ಆಡಳಿತದ ಗುರಿ ಎಂದು ಮನವಿ ಮಾಡಿದ್ದಾರೆ.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260720-17-509697098
Read the complete story at Prajavani