ಸಜಾ ಖೈದಿ ಪ್ರಜ್ವಲ್ ರೇವಣ್ಣಗೆ ಒಳ ಸಂದರ್ಶನಕ್ಕೆ ಕೋರ್ಟ್ ಅಸ್ತು
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಬಂಧಿಯಾಗಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ (Prajwal Revanna) ಅವರಿಗೆ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ನೇಹಿತರೊಂದಿಗೆ ಒಳ ಸಂದರ್ಶನ (Internal Interview) ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ. ಒಳ ಸಂದರ್ಶನಕ್ಕೆ ಅವಕಾಶ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಬಂಧಿಯಾಗಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ (Prajwal Revanna) ಅವರಿಗೆ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ನೇಹಿತರೊಂದಿಗೆ ಒಳ ಸಂದರ್ಶನ (Internal Interview) ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ. ಒಳ ಸಂದರ್ಶನಕ್ಕೆ ಅವಕಾಶ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ (Court), ಆದೇಶವನ್ನು ಕಾಯ್ದಿರಿಸಿತ್ತು. ಇದೀಗ ಅರ್ಜಿಯನ್ನು ಮಾನ್ಯ ಮಾಡಿ ಒಳ ಸಂದರ್ಶನಕ್ಕೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದೆ. ನ್ಯಾಯಾಲಯದ ಆದೇಶದಂತೆ, ಜೈಲು ಮುಖ್ಯ ಅಧೀಕ್ಷಕರು ಕಾರಾಗೃಹ ನಿಯಮಾವಳಿಗೆ (Jail Rules) ಅನುಗುಣವಾಗಿ ಕುಟುಂಬಸ್ಥರು, ಸಂಬಂಧಿಕರು ಮತ್ತು ಸ್ನೇಹಿತರಿಗೆ ಭೇಟಿಯ ಅವಕಾಶ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ. ಭೇಟಿಯ ವೇಳೆ ಕಾರಾಗೃಹದ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ. ಯಾವುದೇ ಕಾರಣದಿಂದ ಭೇಟಿಗೆ ಅವಕಾಶ ನಿರಾಕರಿಸಿದರೆ, ಅದರ ಬಗ್ಗೆ ಅಪರಾಧಿಗೆ ಸೂಕ್ತ ಕಾರಣವನ್ನು ಲಿಖಿತವಾಗಿ ತಿಳಿಸಬೇಕು ಎಂದೂ ಆದೇಶಿಸಿದೆ. ಇದೇ ವೇಳೆ, ಭೇಟಿಯ ದಿನಾಂಕ ಮತ್ತು ಸಮಯವನ್ನು ಜೈಲು ಆಡಳಿತವೇ ನಿಯಮಾನುಸಾರ ನಿಗದಿಪಡಿಸಬೇಕು ಹಾಗೂ ಈ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿರಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.