ಕೊಪ್ಪಳ | ಲಾರಿಗೆ ಬುಲೆರೊ ಡಿಕ್ಕಿ; ಇಬ್ಬರು ಸಾವು, ಎಂಟು ಜನರಿಗೆ ಗಾಯ
ಕೊಪ್ಪಳ: ತಾಲ್ಲೂಕಿನ ಮುನಿರಾಬಾದ್ ಸಮೀಪದ ಕೆರೆಹಳ್ಳಿ–ಶಹಪುರ ಗ್ರಾಮಗಳ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಬುಲೆರೊ ವಾಹನ ಹಿಂದಿನಿಂದ ಸೋಮವಾರ ರಾತ್ರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.ಮೃತರನ್ನು ಹುಲಿಗಿ ಗ್ರಾಮದ ಖಾದರ್ ಖಾನ್
ಕೊಪ್ಪಳ: ತಾಲ್ಲೂಕಿನ ಮುನಿರಾಬಾದ್ ಸಮೀಪದ ಕೆರೆಹಳ್ಳಿ–ಶಹಪುರ ಗ್ರಾಮಗಳ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಬುಲೆರೊ ವಾಹನ ಹಿಂದಿನಿಂದ ಸೋಮವಾರ ರಾತ್ರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.ಮೃತರನ್ನು ಹುಲಿಗಿ ಗ್ರಾಮದ ಖಾದರ್ ಖಾನ್ (80) ಹಾಗೂ ಅದೇ ಕುಟುಂಬದ ಮಹಿಳೆ ಎಂದು ಪ್ರಾಥಮಿಕ ಮಾಹಿತಿಯಿಂದ ಗುರುತಿಸಲಾಗಿದೆ. ಕುಷ್ಟಗಿ ಮಾರ್ಗದಿಂದ ಹೊಸಪೇಟೆ ಕಡೆಗೆ ತೆರಳುತ್ತಿದ್ದ ಬುಲೆರೊ ವಾಹನ ವೇಗವಾಗಿ ಬಂದು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ವಾಹನ ಜಖಂಗೊಂಡಿದೆ.ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ
Read the complete story at Prajavani