ವಿದ್ಯಾರ್ಥಿನಿ ಬಳಿ ಲಂಚಕ್ಕೆ ಕೈಯೊಡ್ಡಿದ ಪ್ರಿನ್ಸಿಪಾಲ್ ʻಲೋಕಾʼ ಬಲೆಗೆ
ಶಿವಮೊಗ್ಗ: ಭದ್ರಾವತಿಯಲ್ಲಿ (Bhadravathi) ವಸತಿ ಶಾಲೆಗೆ ದಾಖಲಿಸಿಕೊಳ್ಳಲು ವಿದ್ಯಾರ್ಥಿನಿಯ (Student) ಪೋಷಕರ ಬಳಿ ಲಂಚಕ್ಕೆ ಕೈಯೊಡ್ಡಿದ ಪ್ರಿನ್ಸಿಪಾಲ್ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾನೆ. ಹುಣಸೆಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ (Kittur Rani Channamma Residential School) ಪ್ರಿನ್ಸಿಪಾಲ್ ನಾಮದೇವ ಲೋಕಾಯುಕ್ತ ಬಲೆಗೆ ಬಿದ

ಶಿವಮೊಗ್ಗ: ಭದ್ರಾವತಿಯಲ್ಲಿ (Bhadravathi) ವಸತಿ ಶಾಲೆಗೆ ದಾಖಲಿಸಿಕೊಳ್ಳಲು ವಿದ್ಯಾರ್ಥಿನಿಯ (Student) ಪೋಷಕರ ಬಳಿ ಲಂಚಕ್ಕೆ ಕೈಯೊಡ್ಡಿದ ಪ್ರಿನ್ಸಿಪಾಲ್ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾನೆ. ಹುಣಸೆಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ (Kittur Rani Channamma Residential School) ಪ್ರಿನ್ಸಿಪಾಲ್ ನಾಮದೇವ ಲೋಕಾಯುಕ್ತ ಬಲೆಗೆ ಬಿದ್ದ ಪ್ರಿನ್ಸಿಪಾಲ್. ವಿದ್ಯಾರ್ಥಿನಿಯನ್ನು 7ನೇ ತರಗತಿಗೆ ದಾಖಲಿಸಿಕೊಳ್ಳಲು ನಾಮದೇವ 20 ಸಾವಿರ ರೂ. ಲಂಚ ಕೇಳಿದ್ದ. ಶಾಲೆಗೆ ಡ್ರಮ್ ಸೆಟ್ ಬೇಕು ಎಂಬ ನೆಪದಲ್ಲಿ ಲಂಚ ಕೇಳಿದ್ದ. ಈ ಸಂಬಂಧ ವಿದ್ಯಾರ್ಥಿನಿಯ ಪೋಷಕರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಇದನ್ನೂ ಓದಿ: ಮಹಿಳೆಯರ ಚಪ್ಪಲಿ, 9 ಸೀರೆ ಜೊತೆ 10,000 ಲಂಚ ಪಡೆಯುವಾಗ ರೆಡ್ಹ್ಯಾಂಡಾಗಿ ಸಿಕ್ಕಿಬಿದ್ದ ಎಪಿಪಿ ಇಂದು (ಜು.20) 10 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್, ಇನ್ಸ್ಪೆಕ್ಟರ್ ರುದ್ರೇಶ್ ನೇತೃತ್ವದ ತಂಡದಿಂದ ದಾಳಿ ನಡೆದಿತ್ತು. ಇದನ್ನೂ ಓದಿ: 5 ಲಕ್ಷ ಲಂಚಕ್ಕೆ ಕೈಯೊಡ್ಡಿದ್ದ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ʻಲೋಕಾʼ ಬಲೆಗೆ