ರಾಜೀನಾಮೆಗೆ ‘ಕಾಕ್ರೋಚ್’ ಪಟ್ಟು: ಅಮಿತ್ ಶಾ ಜತೆ ಮಾತುಕತೆ ನಡೆಸಿದ ಪ್ರಧಾನ್
ನವದೆಹಲಿ: ಪರೀಕ್ಷಾ ಪ್ರಶ್ನೆ ಪತ್ರಿಕೆಗಳ ಸೋರಿಕೆ ಸಂಬಂಧ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪ್ರತಿಭಟನೆ ತೀವ್ರಗೊಂಡಿದೆ. ಇದರ ಬೆನ್ನಲ್ಲೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ಮಾತುಕತೆ ನಡೆಸಿದ್ದಾರೆ.ಶಾ ಅವರನ್ನು ಸಂಸತ್ತಿನ ಆವರಣದಲ್ಲಿರುವ ಅವರ ಕಚೇರಿಯಲ್ಲೇ ಪ್ರಧಾನ್ ಭೇಟಿಯಾಗಿದ್ದಾರೆ. ಯಾವ ವಿಚಾರ ಚರ್

ನವದೆಹಲಿ: ಪರೀಕ್ಷಾ ಪ್ರಶ್ನೆ ಪತ್ರಿಕೆಗಳ ಸೋರಿಕೆ ಸಂಬಂಧ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪ್ರತಿಭಟನೆ ತೀವ್ರಗೊಂಡಿದೆ. ಇದರ ಬೆನ್ನಲ್ಲೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ಮಾತುಕತೆ ನಡೆಸಿದ್ದಾರೆ.ಶಾ ಅವರನ್ನು ಸಂಸತ್ತಿನ ಆವರಣದಲ್ಲಿರುವ ಅವರ ಕಚೇರಿಯಲ್ಲೇ ಪ್ರಧಾನ್ ಭೇಟಿಯಾಗಿದ್ದಾರೆ. ಯಾವ ವಿಚಾರ ಚರ್ಚೆಯಾಗಿದೆ ಎಂಬುದು ಸದ್ಯಕ್ಕೆ ಬಹಿರಂಗವಾಗಿಲ್ಲ ಎಂದು ಪಿಟಿಐ ವರದಿ ಮಾಡಿದೆ.ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ), ಪ್ರಧಾನ್ ರಾಜೀನಾಮೆಗೆ ಆಗ್ರಹಿಸುತ್ತಿದೆ. ದೆಹಲಿಯ ಜಂತರ್ ಮಂತರ್ನಲ್ಲಿ ಜೂನ್ 20ರಿಂದ ಪ್ರತಿಭಟನೆ ನಡೆಯುತ್ತಿದ್ದು, ಇಂದು (ಜುಲೈ 21) ‘ಸಂಸತ್ ಚಲೊ’ ನಡೆಸಲಾಗುತ್ತಿದೆ.ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನವೂ ಆರಂಭವಾಗುತ್ತಿರುವುದರಿಂದ, ಸಿಜೆಪಿ ಪ್ರತಿನಿಧಿಗಳೊಂದಿಗೆ ಮಾತುಕತೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಸಿಜೆಪಿಯ ಇಬ್ಬರು ವಕ್ತಾರರೊಂದಿಗೆ ಮಾತುಕತೆ ನಡೆಸಿದ್ದಾರೆ.ಸಚಿವರೇ ರಾಜೀನಾಮೆ ನೀಡಿ; ಧರ್ಮೇಂದ್ರ ಪ್ರಧಾನ್ಗೆ ಶಿಕ್ಷಣ ತಜ್ಞರ ಒತ್ತಾಯಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಅಭಿಜೀತ್