KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ವಿರುದ್ಧ ಸಿಬಿಐ ತನಿಖೆ ಕೋರಿ ಹೈಕೋರ್ಟ್ಗೆ ರಿಟ್ ಅರ್ಜಿ
ಬೆಂಗಳೂರು: ಕೆಪಿಎಸ್ಸಿ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ವಿರುದ್ಧ ಸಿಬಿಐ ತನಿಖೆ ಕೋರಿ ಶಾಸಕ ಯತ್ನಾಳ್ (Basanagouda Patil Yatnal) ಹಾಗೂ ವಿದ್ಯಾರ್ಥಿಗಳ ಸಂಘಟನೆ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶವನ್ನು ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ

ಬೆಂಗಳೂರು: ಕೆಪಿಎಸ್ಸಿ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ವಿರುದ್ಧ ಸಿಬಿಐ ತನಿಖೆ ಕೋರಿ ಶಾಸಕ ಯತ್ನಾಳ್ (Basanagouda Patil Yatnal) ಹಾಗೂ ವಿದ್ಯಾರ್ಥಿಗಳ ಸಂಘಟನೆ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶವನ್ನು ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಸಿಬಿಐ ತನಿಖೆ ಕೋರಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ವಿದ್ಯಾರ್ಥಿಗಳ ಸಂಘಟನೆಯಿಂದ ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆ ನಡೆಸಿತು. ಇದನ್ನೂ ಓದಿ: ರಾಜ್ಯದಲ್ಲಿ ತೀವ್ರ ಬರದ ಛಾಯೆ – ತುಂಗಾ ಡ್ಯಾಂ ನೀರು ನಂಬಿ ಬೆಳೆ ಬೆಳೆಯದಂತೆ ಮನವಿ ಅರ್ಜಿಯಲ್ಲಿ, ಶಿವಶಂಕರಪ್ಪ ಅವರು ತಮ್ಮ ಪುತ್ರಿಯರಿಗೆ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆ ಕೊಡಿಸಿದ್ದಾರೆ. ಹುದ್ದೆಗಾಗಿ ಅವರ ಪುತ್ರಿಯಿಂದ ಕೇವಲ 40 ಸಾವಿರ ರೂ. ಆದಾಯವಿದೆ ಎಂದು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ಮಾಡಿರುವ ಆರೋಪದ ಬಗ್ಗೆ ಉಲ್ಲೇಖಿಸಿದ್ದಾರೆ. ಜೊತೆಗೆ ಸಿಬಿಐ ತನಿಖೆಗೆ ಮನವಿ ಮಾಡಿದ್ದಾರೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರಾದ ವೆಂಕಟೇಶ ದಳವಾಯಿ ಅವರು, ಪ್ರಸ್ತುತ ನಡೆಯುತ್ತಿರುವ ತನಿಖೆಯು ಕೇವಲ ಕಣ್ಣೊರೆಸುವ ತಂತ್ರ ಎಂದು ವಾದಿಸಿದರು. ಪ್ರಕರಣದ ಆರೋಪಗಳು ಆಘಾತಕಾರಿ. ಈಗ ಎಸ್ಐಟಿ ರಚಿಸುವುದು ಸೂಕ್ತವಲ್ಲ. ಹೀಗಾಗಿ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ಅಗತ್ಯ ಎಂದು ತಿಳಿಸಿ ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ. ವ್ಯವಸ್ಥೆ ಶುದ್ದೀಕರಿಸದಿದ್ದರೆ ಅರ್ಹತೆಯಿರುವ ಯುವಜನತೆ ನರಳುತ್ತಾರೆ. ಎಂದು ಪೀಠ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ತುಂಗಭದ್ರಾ ಡ್ಯಾಂನಿಂದ ನೀರು ಬಿಡುಗಡೆಗೆ ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ