ಜಮ್ಮು ಕಾಶ್ಮೀರದಲ್ಲಿ ಧಾರಾಕಾರ ಮಳೆಗೆ 23 ಜನ ಬಲಿ
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ (Jammu Kashmir) ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಣಾಮ ಈವರೆಗೆ 23 ಜನ ಸಾವನ್ನಪ್ಪಿದ್ದಾರೆ. ಹಲವೆಡೆ ಪ್ರವಾಹದಲ್ಲಿ ವಾಹನಗಳು ಕೊಚ್ಚಿ ಹೋಗಿವೆ. ಪೂಂಚ್ನಲ್ಲಿ ಭೂಕುಸಿತ ಸಂಭವಿಸಿ, ನಾಲ್ವರು ಮಹಿಳೆಯರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಜಮ್ಮು-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ರಗ್ಗಿ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ (Jammu Kashmir) ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಣಾಮ ಈವರೆಗೆ 23 ಜನ ಸಾವನ್ನಪ್ಪಿದ್ದಾರೆ. ಹಲವೆಡೆ ಪ್ರವಾಹದಲ್ಲಿ ವಾಹನಗಳು ಕೊಚ್ಚಿ ಹೋಗಿವೆ. ಪೂಂಚ್ನಲ್ಲಿ ಭೂಕುಸಿತ ಸಂಭವಿಸಿ, ನಾಲ್ವರು ಮಹಿಳೆಯರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಜಮ್ಮು-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ರಗ್ಗಿ ನಲ್ಲಾ ಬಳಿಯ ಗುಡ್ಡ ಕುಸಿತಗೊಂಡಿದ್ದು, ಅನೇಕ ವಾಹನಗಳು ಸಿಲುಕಿವೆ. ಬಸ್ಸಿನ ಮೇಲೆ ಬೃಹತ್ ಬಂಡೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಹಲವಾರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ರಾಜ್ಯದ ಹೆದ್ದಾರಿಯಲ್ಲಿ ಅಪರಿಚಿತ ವ್ಯಕ್ತಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಯು.ಟಿ.ಖಾದರ್ ಇನ್ನೂ, ದಕ್ಷಿಣ ಸಿಕ್ಕಿಂನ ಸಮರ್ದುಂಗ್ ಬಳಿ ಇರುವ ಜಲವಿದ್ಯುತ್ ಯೋಜನೆಯ ಸುರಂಗ ಮಾರ್ಗದಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಈ ವೇಳೆ ಸುರಂಗದೊಳಗೆ ವಿಷಕಾರಿ ಅನಿಲ ಸೋರಿಕೆಯಾಗಿದ್ದು, ಕನಿಷ್ಠ 10 ಮಂದಿ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. 17 ಮಂದಿ ಸಿಲುಕಿಕೊಂಡಿದ್ದಾರೆ. ನಾಮ್ಚಿ ಜಿಲ್ಲೆಯ 5ನೇ ಹಂತದ ತೀಸ್ತಾ ಜಲವಿದ್ಯುತ್ ಯೋಜನೆಯ ಸುರಂಗದೊಳಗೆ ಕಾರ್ಮಿಕರು ಸಿಲುಕಿದ್ದು, ರಕ್ಷಣಾ ತಂಡಗಳು ಕಾರ್ಯಾಚರಣೆ ಮುಂದುವರಿಸಿವೆ. ಇನ್ನು, ದುರಂತದ ಬಗ್ಗೆ ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ಗೆ ಕರೆ ಮಾಡಿ ಪ್ರಧಾನಿ ಮೋದಿ ಮಾಹಿತಿ ಪಡೆದುಕೊಂಡಿದ್ದಾರೆ. ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.ಇದನ್ನೂ ಓದಿ: SC-ST ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಪರಮೇಶ್ವರ್