ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್ ದೀಪ್ಕೆ ಘೋಷಣೆ
ನವದೆಹಲಿ: ಇಂದು ತಮ್ಮ ಪ್ರತಿಭಟನೆ(Protest) ಹಾಗೂ ಚಲೋ ಸಂಸದ್(Chalo Sansad) ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ(Abhijeet Dipke) ತಿಳಿಸಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು, ನಮ್ಮ ಹಕ್ಕುಗಳಿಗಾಗಿ ಮತ್ತು ಬೇಡಿಕೆಗಳು ಈಡೇರುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಮಂಗಳವಾರವೂ ಸಂಸತ್ತಿಗೆ ಮೆರವಣಿಗೆ(Cha

ನವದೆಹಲಿ: ಇಂದು ತಮ್ಮ ಪ್ರತಿಭಟನೆ(Protest) ಹಾಗೂ ಚಲೋ ಸಂಸದ್(Chalo Sansad) ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ(Abhijeet Dipke) ತಿಳಿಸಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು, ನಮ್ಮ ಹಕ್ಕುಗಳಿಗಾಗಿ ಮತ್ತು ಬೇಡಿಕೆಗಳು ಈಡೇರುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಮಂಗಳವಾರವೂ ಸಂಸತ್ತಿಗೆ ಮೆರವಣಿಗೆ(Chalo Sansad) ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ಮುಂದುವರಿಯುತ್ತದೆ. ಮುಂದಿನ ಮೆರವಣಿಗೆ ಕುರಿತು ಸಭೆ ಇನ್ನೂ ನಡೆಯುತ್ತಿದೆ. ಮುಂದಿನ ಕ್ರಮವನ್ನು ವಿವರಿಸುವ ಅಧಿಕೃತ ಹೇಳಿಕೆಯನ್ನು ಪಕ್ಷ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ಹೇಳಿದರು. ಇದನ್ನೂ ಓದಿ: ಸಿಜೆಪಿ ಪ್ರತಿಭಟನೆಯ ಡ್ರೋನ್ ವಿಡಿಯೋ ವೈರಲ್ — ತನಿಖೆ ಆರಂಭಿಸಿದ ದೆಹಲಿ ಪೊಲೀಸ್ ಸೋಮವಾರದ ತೀವ್ರ ಗಲಾಟೆ ಮತ್ತು ಪೋಲಿಸರ ತೆರವು ಕಾರ್ಯಾಚರಣೆಯ ನಂತರವೂ, ಸಿಜೆಪಿ ಬೆಂಬಲಿಗರು ಹಾಗೂ ಅಭಿಜಿತ್ ದೀಪ್ಕೆ ಸೋಮವಾರ ಸಂಜೆಯ ವೇಳೆಗೆ ದೆಹಲಿಯ ಜಂತರ್ ಮಂತರ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ʻಕಾಕ್ರೋಚ್ʼ ಕಿಚ್ಚು – 5 ಐಪಿಎಸ್ ಅಧಿಕಾರಿಗಳು ಸೇರಿ 118ಕ್ಕೂ ಹೆಚ್ಚು ಪೊಲೀಸರಿಗೆ ಗಾಯ; 70ಕ್ಕೂ ಹೆಚ್ಚು ಮಂದಿ ವಶಕ್ಕೆ ಸೋಮವಾರ ಪಾರ್ಲಿಮೆಂಟ್ ಸ್ಟ್ರೀಟ್ನಲ್ಲಿ ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿ ಪ್ರತಿಭಟನಾಕಾರರನ್ನು ತಡೆದಿದ್ದರು. ಕೊನೆಗೆ ಪರಿಸ್ಥಿತಿ ನಿಯಂತ್ರಣಕ್ಕೆ ಲಾಠಿಚಾರ್ಜ್ ಮತ್ತು ಅಶ್ರುವಾಯು ಪ್ರಯೋಗ ನಡೆದಿತ್ತು. ಇದರಲ್ಲಿ ಹಲವು ಪ್ರತಿಭಟನಾಕಾರರು ಮತ್ತು ಪೊಲೀಸರು ಗಾಯಗೊಂಡಿದ್ದರು.