ಮೋದಿ ಭಾರತ ಕಂಡ ಅತ್ಯಂತ ‘ಯುವಜನ ವಿರೋಧಿ’ ಪ್ರಧಾನಿ: ರಾಹುಲ್ ಟೀಕೆ
ನವದೆಹಲಿ: ‘ನರೇಂದ್ರ ಮೋದಿ ಭಾರತ ಕಂಡ ಅತ್ಯಂತ ‘ಯುವಜನ ವಿರೋಧಿ ಪ್ರಧಾನಿ’ ಆಗಿದ್ದಾರೆ. ಅವರು ಎಷ್ಟರಮಟ್ಟಿಗೆ ‘ಯುವಜನ ವಿರೋಧಿ’ ಎಂದರೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಪಡೆಯಲು ಕೂಡ ಅವರಿಂದ ಸಾಧ್ಯವಾಗುತ್ತಿಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ ನೀಟ್ ಪ್ರಶ್ನೆಪತ್ರಿಕೆ ಸ

ನವದೆಹಲಿ: ‘ನರೇಂದ್ರ ಮೋದಿ ಭಾರತ ಕಂಡ ಅತ್ಯಂತ ‘ಯುವಜನ ವಿರೋಧಿ ಪ್ರಧಾನಿ’ ಆಗಿದ್ದಾರೆ. ಅವರು ಎಷ್ಟರಮಟ್ಟಿಗೆ ‘ಯುವಜನ ವಿರೋಧಿ’ ಎಂದರೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಪಡೆಯಲು ಕೂಡ ಅವರಿಂದ ಸಾಧ್ಯವಾಗುತ್ತಿಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ನಡೆಸಿ, ಸಂಸತ್ತಿನೆಡೆಗೆ ಮೆರವಣಿಗೆ ಹೊರಟಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಬೆಂಬಲಿಗರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ಈ ಘಟನೆಯನ್ನು ಖಂಡಿಸಿರುವ ರಾಹುಲ್, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.‘ದೇಶದಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಆದರೆ ಇಲ್ಲಿಯವರೆಗೆ ಒಬ್ಬನೇ ಒಬ್ಬ ತಪ್ಪಿತಸ್ಥನಿಗೂ ಶಿಕ್ಷೆಯಾಗಿಲ್ಲ. ಇದರಿಂದ ಶಿಕ್ಷೆ ಅನುಭವಿಸಿದವರು ಮಾತ್ರ ಯುವಜನತೆ’ ಎಂದು ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.ಪೋಸ್ಟ್ ಜೊತೆಗೆ ವಿಡಿಯೊವೊಂದನ್ನು ಹಂಚಿಕೊಂಡಿರುವ ಅವರು, ‘ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ ಅಪರಾಧಿಗಳು ಮುಕ್ತವಾಗಿ ತಿರುಗಾಡುತ್ತಿದ್ದಾರೆ. ನ್ಯಾಯಸಮ್ಮತ ವಿಷಯಗಳನ್ನು ಎತ್ತುತ್ತಿರುವ ವಿದ್ಯಾರ್ಥಿಗಳನ್ನು ಎಳೆದೊಯ್ದು ಹೊಡೆಯಲಾಗುತ್ತಿದೆ. ಈ ಸರ್ಕಾರ ಯುವಜನತೆ ವೈಫಲ್ಯಕ್ಕೆ ಕಾರಣವಾಗುವುದಲ್ಲದೇ ಅವರ ಮೇಲೆ ದಾಳಿ ನಡೆಸುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.‘ಬೇಡಿಕೆ ನ್ಯಾಯಸಮ್ಮತವಾಗಿವೆ’‘ನ್ಯಾಯಯುತವಾದ ಶಿಕ್ಷಣ ವ್ಯವಸ್ಥೆಯನ್ನು ಹೊಂದುವುದು ಅವರ(ವಿದ್ಯಾರ್ಥಿಗಳು) ಹಕ್ಕಾಗಿದೆ. ಅವರು ಪ್ರತಿಭಟನೆ ಮಾಡುತ್ತಿರುವುದರಲ್ಲಿ ಯಾವುದೇ ತಪ್ಪು ಇಲ್ಲ. ಸರ್ಕಾರ ಹಾಗೂ ಪೊಲೀಸರು ಮಾಡುತ್ತಿರುವುದು ಅಸಹ್ಯಕರವಾಗಿದೆ’ ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.‘ಇದು ವರ್ತಿಸುವ ರೀತಿಯೇ ಅಲ್ಲ. ವಿದ್ಯಾರ್ಥಿಗಳ ಮೇಲೆ ಅಶ್ರುವಾಯು ಪ್ರಯೋಗಿಸುವುದು, ಲಾಠಿ ಪ್ರಹಾರ ಮಾಡುವುದು ಪ್ರಜಾಪ್ರಭುತ್ವವಲ್ಲ. ಅವರ ಬೇಡಿಕೆಗಳು ನ್ಯಾಯಸಮ್ಮತವಾಗಿವೆ. ಪ್ರಧಾನಿಯವರು ಈ ಬೇಡಿಕೆಗಳನ್ನು ಒಪ್ಪಿಕೊಂಡು ಕ್ರಮ ತೆಗೆದುಕೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ‘ನಮ್ಮ ಶಿಕ್ಷಣ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿರುವ ರೀತಿಯಿಂದ ಪ್ರತಿಯೊಬ್ಬರೂ ಬೇಸತ್ತಿದ್ದಾರೆ’ ಎಂದು ಹೇಳಿದ್ದಾರೆ.