ಮನೆಮುಂದೆ ಆಟವಾಡ್ತಿದ್ದಾಗ ಬೀದಿ ನಾಯಿಗಳು ದಾಳಿ – 4 ವರ್ಷದ ಬಾಲಕನ ಸ್ಥಿತಿ ಗಂಭೀರ
ರಾಯಚೂರು: ಬೀದಿ ನಾಯಿಗಳ ಕಾಟ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ರಾಯಚೂರು (Raichuru) ಜಿಲ್ಲೆಯ ಮಲಿಯಾಬಾದ್ ಗ್ರಾಮದಲ್ಲಿ ಮನೆಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ದಾಳಿ ವೇಳೆ ನಾಯಿಗಳು ಬಾಲಕನ ತಲೆಯ ಭಾಗವನ್ನ ಸಂಪೂರ್ಣವಾಗಿ ಕಚ್ಚಿದೆ. ಈ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿದ

ರಾಯಚೂರು: ಬೀದಿ ನಾಯಿಗಳ ಕಾಟ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ರಾಯಚೂರು (Raichuru) ಜಿಲ್ಲೆಯ ಮಲಿಯಾಬಾದ್ ಗ್ರಾಮದಲ್ಲಿ ಮನೆಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ದಾಳಿ ವೇಳೆ ನಾಯಿಗಳು ಬಾಲಕನ ತಲೆಯ ಭಾಗವನ್ನ ಸಂಪೂರ್ಣವಾಗಿ ಕಚ್ಚಿದೆ. ಈ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸದ್ಯ ಬಾಲಕನನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಬಲ್ಡೋಟಾ ಕಾರ್ಖಾನೆಯ ವಿರುದ್ಧ ರೈತರು, ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ಇತ್ತ, ಚಿತ್ರದುರ್ಗದಲ್ಲಿ ಬೀದಿ ನಾಯಿಗಳ ದಾಳಿ ಮತ್ತೆ ಆತಂಕ ಮೂಡಿಸಿದೆ. ನಗರದ ಚೇಳಗುಡ್ಡ ಮತ್ತು ನೆಹರು ನಗರ ಬಡಾವಣೆಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ಪುಟ್ಟ ಮಕ್ಕಳು ನಾಯಿಗಳ ದಾಳಿಗೆ ಒಳಗಾಗಿ ಗಾಯಗೊಂಡಿದ್ದಾರೆ. ಮನೆ ಮುಂದೆ ಆಟವಾಡುತ್ತಿದ್ದ ಸುಮಾರು 5-6 ವರ್ಷದ ಮಕ್ಕಳ ಮೇಲೆ ಏಕಾಏಕಿ ಬೀದಿ ನಾಯಿಗಳು ದಾಳಿ ನಡೆಸಿವೆ. ದಾಳಿಯಿಂದ ಮಕ್ಕಳ ಮುಖ, ಕೈ, ಕಾಲು ಸೇರಿದಂತೆ ದೇಹದ ಹಲವು ಭಾಗಗಳಿಗೆ ಗಾಯಗಳಾಗಿವೆ. ಗಾಯಗೊಂಡ ಆಲೀನಾ, ಆದಿಲ್, ಮನ್ವಿತ್ ಹಾಗೂ ಮತ್ತೋರ್ವ ಬಾಲಕ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.