ಮಕ್ಕಳಿಗೆ ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿ; ಅರ್ಜಿ ಆಹ್ವಾನ
ಹೊಸಪೇಟೆ: ಮಕ್ಕಳ ದಿನಾಚರಣೆ ಪ್ರಯುಕ್ತ ದೈರ್ಯ ಮತ್ತು ಸಾಹಸ ಪ್ರದರ್ಶಿಸಿದಂತಹ ವಿಶೇಷ ಸಾಧನೆ ಮಾಡಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಪ್ರಶಸ್ತಿ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 5 ಕೊನೆಯ ದಿನ.ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿರುವ ವ್

ಹೊಸಪೇಟೆ: ಮಕ್ಕಳ ದಿನಾಚರಣೆ ಪ್ರಯುಕ್ತ ದೈರ್ಯ ಮತ್ತು ಸಾಹಸ ಪ್ರದರ್ಶಿಸಿದಂತಹ ವಿಶೇಷ ಸಾಧನೆ ಮಾಡಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಪ್ರಶಸ್ತಿ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 5 ಕೊನೆಯ ದಿನ.ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿರುವ ವ್ಯಕ್ತಿ ಮತ್ತು ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು. ಪ್ರಶಸ್ತಿಗೆ ಆಯ್ಕೆಯಾದವರಿಗೆ ತಲಾ ₹ 10 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿಗೆ ₹.25,000 ಹಾಗೂ ಸಂಸ್ಥೆಗೆ ₹.1,00,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಅರ್ಜಿ ನಮೂನೆಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260722-25-1646470623