ರಾಮಮಂದಿರ ಟ್ರಸ್ಟ್ ಸಿಇಒ ಹುದ್ದೆಗೆ 5 ಸಾವಿರ ಅರ್ಜಿ: ಆಯ್ಕೆ ಮುಂದೂಡಿಕೆ
ಅಯೋಧ್ಯೆ: ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಹುದ್ದೆಗೆ 5,200 ಅರ್ಜಿಗಳು ಸಲ್ಲಿಕೆಯಾಗಿವೆ. ಸಿಇಒ ಆಯ್ಕೆಯನ್ನು ಒಂದು ತಿಂಗಳು ಮುಂದೂಡಲಾಗಿದೆ ಎಂದು ಟ್ರಸ್ಟ್ ಬುಧವಾರ ತಿಳಿಸಿದೆ. ಈಗಿನ ಆಡಳಿತಾತ್ಮಕ ಕಾರ್ಯ ನಿರ್ವಹಣೆಗಾಗಿ ತಾತ್ಕಾಲಿಕವಾಗಿ ಸಿಇಒ ಒಬ್ಬರನ್ನು ನೇಮಿಸಲು ನಿರ್ಧರಿಸಲಾಗಿದೆ. ಇಲ್ಲಿ ನಡೆದ ಟ

ಅಯೋಧ್ಯೆ: ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಹುದ್ದೆಗೆ 5,200 ಅರ್ಜಿಗಳು ಸಲ್ಲಿಕೆಯಾಗಿವೆ. ಸಿಇಒ ಆಯ್ಕೆಯನ್ನು ಒಂದು ತಿಂಗಳು ಮುಂದೂಡಲಾಗಿದೆ ಎಂದು ಟ್ರಸ್ಟ್ ಬುಧವಾರ ತಿಳಿಸಿದೆ. ಈಗಿನ ಆಡಳಿತಾತ್ಮಕ ಕಾರ್ಯ ನಿರ್ವಹಣೆಗಾಗಿ ತಾತ್ಕಾಲಿಕವಾಗಿ ಸಿಇಒ ಒಬ್ಬರನ್ನು ನೇಮಿಸಲು ನಿರ್ಧರಿಸಲಾಗಿದೆ. ಇಲ್ಲಿ ನಡೆದ ಟ್ರಸ್ಟಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಟ್ರಸ್ಟ್ನ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ತಿಳಿಸಿದರು. ‘ಸಿಇಒ ಹುದ್ದೆಗೆ ಹೆಚ್ಚು ಅರ್ಜಿಗಳು ಬಂದಿವೆ. ಎಲ್ಲವನ್ನೂ ಪರಿಶೀಲಿಸಲು ಕಾಲಾವಕಾಶ ನೀಡುವಂತೆ, ಸಿಇಒ ಆಯ್ಕೆಗಾಗಿ ನೇಮಿಸಿರುವ ಸಮಿತಿಯು ಕೋರಿತು. ಇದಕ್ಕೆ ಟ್ರಸ್ಟ್ ಸಮ್ಮತಿಸಿತು’ ಎಂದರು. ‘ರಾಮಮಂದಿರದ ಎಲ್ಲಾ ಧಾರ್ಮಿಕ ವ್ಯವಹಾರಗಳ ಮೇಲ್ವಿಚಾರಣೆಗಾಗಿ ಒಂಬತ್ತು ಸದಸ್ಯರ ಶಾಶ್ವತ ಸಮಿತಿಯೊಂದನ್ನು ರಚಿಸಲು ಟ್ರಸ್ಟ್ ನಿರ್ಧರಿಸಿದೆ. ಅಯೋಧ್ಯೆಯ ಐವರು, ಹೊರಗಿನ ನಾಲ್ವರು ಹಾಗೂ ಒಬ್ಬ ಸಾಧುವನ್ನು ಈ ಸಮಿತಿ ಒಳಗೊಂಡಿರುತ್ತದೆ’ ಎಂದು ಅವರು ಹೇಳಿದರು.
Read the complete story at Prajavani