ಮಂಗಳೂರು | ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬಿದ್ದ ಮರ – ಐದು ವರ್ಷದ ಬಾಲಕಿ ಸಾವು
ಮಂಗಳೂರು: ಚಲಿಸುತ್ತಿದ್ದ ಶಾಲಾ ವಾಹನದ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಐದು ವರ್ಷದ ಬಾಲಕಿ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ ಮಂಗಳೂರಲ್ಲಿ (Mangaluru) ನಡೆದಿದೆ. ಚಿರನ್ವಿ (5) ಮೃತಪಟ್ಟ ಮಗು. ಬಂಟ್ವಾಳ ತಾಲೂಕಿನ ಬಿಳಿಯೂರಿನ ಚಂದ್ರಹಾಸ ಅವರ ಪುತ್ರಿ ಚಿರನ್ವಿ. ಕಲ್ಲಡ್ಕ ಶ್ರೀರಾಮ ಶಾಲೆಗೆ ಸೇರಿದ ಶಾಲಾ ವಾಹನದ ಮೇಲೆ ಮರ ಬಿದ್ದು ಈ ಅ

ಮಂಗಳೂರು: ಚಲಿಸುತ್ತಿದ್ದ ಶಾಲಾ ವಾಹನದ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಐದು ವರ್ಷದ ಬಾಲಕಿ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ ಮಂಗಳೂರಲ್ಲಿ (Mangaluru) ನಡೆದಿದೆ. ಚಿರನ್ವಿ (5) ಮೃತಪಟ್ಟ ಮಗು. ಬಂಟ್ವಾಳ ತಾಲೂಕಿನ ಬಿಳಿಯೂರಿನ ಚಂದ್ರಹಾಸ ಅವರ ಪುತ್ರಿ ಚಿರನ್ವಿ. ಕಲ್ಲಡ್ಕ ಶ್ರೀರಾಮ ಶಾಲೆಗೆ ಸೇರಿದ ಶಾಲಾ ವಾಹನದ ಮೇಲೆ ಮರ ಬಿದ್ದು ಈ ಅವಘಡ ಸಂಭವಿಸಿದೆ. ಬಂಟ್ವಾಳ ತಾಲೂಕಿನ ಕಲ್ಲೇಟಿ ಕಾನಲ್ತಾಯ ದೈವಸ್ಥಾನದ ಬಳಿ ದುರ್ಘಟನೆ ನಡೆದಿದೆ. ಶ್ರೀರಾಮ ಶಾಲೆಯಲ್ಲಿ ಚಿರನ್ವಿ ಯುಕೆಜಿ ಕಲಿಯುತ್ತಿದ್ದಳು. ಗಂಭೀರ ಗಾಯಗೊಂಡಿದ್ದ ಇಬ್ಬರು ಮಕ್ಕಳಿಗೆ ಕಲ್ಲಡ್ಕ ಹಾಗೂ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಚಿರನ್ವಿಯನ್ನ ತಕ್ಷಣ ಆಟೋದಲ್ಲಿ ಕರೆತರಲಾಗಿತ್ತು.ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದ ದಾರಿ ಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ. ಪುತ್ತೂರು ತಾಲೂಕು ಆಸ್ಪತ್ರೆಗೆ ಬಂಟ್ವಾಳ ತಹಸಿಲ್ದಾರ್ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಮೃತಪಟ್ಟ ಚಿರನ್ವಿ ಕುಟುಂಬಕ್ಕೆ ಜಿಲ್ಲಾಡಳಿತದಿಂದ ಪ್ರಾಕೃತಿಕ ವಿಕೋಪದಡಿಯಲ್ಲಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.