ನೀಟ್ ಪರೀಕ್ಷೆಯನ್ನೇ ರದ್ದು ಮಾಡುವುದು ಪರಿಹಾರ: ತಮಿಳುನಾಡು ಸಿಎಂ ವಿಜಯ್
ಚೆನ್ನೈ: ನೀಟ್ ಪರೀಕ್ಷೆ ವಿಚಾರದಲ್ಲಿ ಸರ್ಕಾರವು ವಿದ್ಯಾರ್ಥಿಗಳು ಹಾಗೂ ಜನರ ಭಾವನೆಗಳನ್ನು ಗೌರವಿಸಬೇಕು. ಇಲ್ಲದಿದ್ದರೆ, ಆ ಪರೀಕ್ಷೆನ್ನೇ ರದ್ದು ಮಾಡಬೇಕು. ಸಮಸ್ಯೆಗಳಿಗೆ ಇರುವ ಪರಿಹಾರ ಅದೊಂದೇ ಎಂದು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ಸಿ. ವಿಜಯ್ ಹೇಳಿದ್ದಾರೆ.ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ನ

ಚೆನ್ನೈ: ನೀಟ್ ಪರೀಕ್ಷೆ ವಿಚಾರದಲ್ಲಿ ಸರ್ಕಾರವು ವಿದ್ಯಾರ್ಥಿಗಳು ಹಾಗೂ ಜನರ ಭಾವನೆಗಳನ್ನು ಗೌರವಿಸಬೇಕು. ಇಲ್ಲದಿದ್ದರೆ, ಆ ಪರೀಕ್ಷೆನ್ನೇ ರದ್ದು ಮಾಡಬೇಕು. ಸಮಸ್ಯೆಗಳಿಗೆ ಇರುವ ಪರಿಹಾರ ಅದೊಂದೇ ಎಂದು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ಸಿ. ವಿಜಯ್ ಹೇಳಿದ್ದಾರೆ.ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಾಗೂ ವಿರೋಧ ಪಕ್ಷದ ನಾಯಕರು ಸಂಸತ್ತಿನ ಹೊರಗೆ ಕಪ್ಪು ಬಟ್ಟೆ ಧರಿಸಿ ನಡೆಸಿರುವ ಪ್ರತಿಭಟನೆ ವಿಚಾರವಾಗಿ ಅವರು ಬುಧವಾರ ಹೇಳಿಕೆ ನೀಡಿದ್ದಾರೆ.ಪ್ರತಿಭಟನೆಗಳನ್ನು ಬೆಂಬಲಿಸುವುದಾಗಿ ತಿಳಿಸಿರುವ ವಿಜಯ್, ‘ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಧರಣಿ ನಡೆಸುತ್ತಿದ್ದ ವೇಳೆ ವಶಕ್ಕೆ ಪಡೆದಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದ್ದು, ಅದನ್ನು ತೀವ್ರವಾಗಿ ಖಂಡಿಸುತ್ತೇನೆ’ ಎಂದಿದ್ದಾರೆ.ನೀಟ್ ರದ್ದುಗೊಳಿಸುವ ವಿಚಾರದಲ್ಲಿ ತಮ್ಮ ಪಕ್ಷದ (ತಮಿಳಗ ವೆಟ್ರಿ ಕಳಗಂ) ನಿಲುವು ಸ್ಪಷ್ಟವಾಗಿದೆ. ವಿರೋಧ ಪಕ್ಷ ಡಿಎಂಕೆ ಮತ ಗಳಿಕೆಗಾಗಿ ರಾಜಕೀಯ ಮಾಡುತ್ತಿದೆ. ನಾವು, ಜನರಿಗೆ ಸುಳ್ಳು ಭರವಸೆಗಳನ್ನು ನೀಡುವುದಿಲ್ಲ ಎಂದೂ ಹೇಳಿದ್ದಾರೆ.