ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲೂ ಪ್ರಶ್ನೆಪತ್ರಿಕೆ ಲೀಕ್ ಆಗಿದೆ: ಕಾಂಗ್ರೆಸ್ಗೆ ಜೆ.ಪಿ.ನಡ್ಡಾ ತಿರುಗೇಟು
– ಪ್ರತಿಭಟನೆಯನ್ನು ರಾಜಕೀಯಗೊಳಿಸಬೇಡಿ: ರಾಹುಲ್ ವಿರುದ್ಧ ಕೇಂದ್ರ ಸಚಿವ ವಾಗ್ದಾಳಿ – ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಸರ್ಕಾರ ಸಿದ್ಧ ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ (NEET Paper Leak) ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ (Rahul Gandhi) ವಾಗ್ದಾಳಿಗೆ ಕೇಂದ್ರ ಸರ್ಕಾರ ಪ್ರತಿದಾಳಿ ನಡೆಸಿದೆ

– ಪ್ರತಿಭಟನೆಯನ್ನು ರಾಜಕೀಯಗೊಳಿಸಬೇಡಿ: ರಾಹುಲ್ ವಿರುದ್ಧ ಕೇಂದ್ರ ಸಚಿವ ವಾಗ್ದಾಳಿ – ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಸರ್ಕಾರ ಸಿದ್ಧ ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ (NEET Paper Leak) ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ (Rahul Gandhi) ವಾಗ್ದಾಳಿಗೆ ಕೇಂದ್ರ ಸರ್ಕಾರ ಪ್ರತಿದಾಳಿ ನಡೆಸಿದೆ. ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲೂ ಪ್ರಶ್ನೆಪತ್ರಿಕೆ ಲೀಕ್ ಆಗಿದೆ. ರಾಹುಲ್ ಗಾಂಧಿ ವಿಷಯಾಂತರ ಮಾಡುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ (J.P.Nadda) ತಿರುಗೇಟು ನೀಡಿದ್ದಾರೆ. ಬಿಜೆಪಿ ಆಡಳಿತದ ಕಳೆದ 10 ವರ್ಷಗಳಲ್ಲಿ 150 ಕ್ಕೂ ಹೆಚ್ಚು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜೆ.ಪಿ.ನಡ್ಡಾ, ವಿದ್ಯಾರ್ಥಿಗಳ ಪ್ರತಿಭಟನೆಯಿಂದ ಕಾಂಗ್ರೆಸ್ ನಾಯಕರು ರಾಜಕೀಯ ಲಾಭ ಪಡೆಯಲು ಬಯಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, 152 ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ ಬಾಂಬ್ ಕೇಂದ್ರ ಸರ್ಕಾರ ಮಾತುಕತೆಗೆ ಸಿದ್ಧವಿದೆ. ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ತನಿಖೆಗೂ ಸಿದ್ಧವಿದೆ. ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲೂ ಪ್ರಶ್ನೆಪತ್ರಿಕೆ ಲೀಕ್ ಆಗಿದೆ. ರಾಹುಲ್ ಗಾಂಧಿ ವಿಷಯಾಂತರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ಗೆ ನಡ್ಡಾ ತಿರುಗೇಟು ನೀಡಿದ್ದಾರೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಸ್ತುತಿ ನೀಡಿದರು. ಆ ಪ್ರಸ್ತುತಿಯಲ್ಲಿ ಅವರು ಸುಮಾರು 150 ಪ್ರಶ್ನೆಪತ್ರಿಕೆ ಸೋರಿಕೆಗಳ ಬಗ್ಗೆ ಚರ್ಚಿಸಿದರು. ಇದು ತನಿಖೆಯ ವಿಷಯವಾಗಿದೆ. ಕೇಂದ್ರ ಜವಾಬ್ದಾರಿಯುತ ಸರ್ಕಾರವಾಗಿರುವುದರಿಂದ, ನಿಸ್ಸಂದೇಹವಾಗಿ ತನಿಖೆ ನಡೆಸಿ ಸತ್ಯವನ್ನು ಸಾರ್ವಜನಿಕರಿಗೆ ಮತ್ತು ರಾಷ್ಟ್ರಕ್ಕೆ ಪ್ರಸ್ತುತಪಡಿಸುತ್ತದೆ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಬೇಡಿಕೆ ಮತ್ತು ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಅವರು ಎತ್ತಿರುವ ವಿಷಯವನ್ನು ನಾವು ರಾಜಕೀಯಗೊಳಿಸಬಾರದು. ಇದರಿಂದ ರಾಜಕೀಯ ಲಾಭ ಪಡೆಯುವುದು ಸೂಕ್ತವಲ್ಲ. ಇದು ಗಂಭೀರ ಸಮಸ್ಯೆಯಾಗಿದ್ದು, ಇದರ ಬಗ್ಗೆ ಆಳವಾದ ಚರ್ಚೆಯ ಅಗತ್ಯವಿದೆ ಎಂದು ರಾಹುಲ್ ಗಾಂಧಿ ನಡೆಗೆ ಜೆ.ಪಿ.ನಡ್ಡಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 3 ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ – ಮಾತುಕತೆಗೆ ತಡ ಯಾಕೆ: ಕೇಂದ್ರ ಸರ್ಕಾರಕ್ಕೆ ಅಣ್ಣಾಮಲೈ ಪ್ರಶ್ನೆ ಸಂಸತ್ತಿನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರ ಚರ್ಚೆಯಾಗಬೇಕೆಂದು ನಾವು ಬಯಸಿದ್ದೇವೆ. ಅಲ್ಪಾವಧಿಯ ಚರ್ಚೆ, ದೀರ್ಘಾವಧಿಯ ಚರ್ಚೆ, ವ್ಯವಹಾರ ಸಲಹಾ ಸಮಿತಿಯಲ್ಲಿ, ನೀವು ಎಷ್ಟು ಸಮಯ ತೆಗೆದುಕೊಳ್ಳಬೇಕೆಂದು ನೀವು ನಿರ್ಧರಿಸುತ್ತೀರಿ. ನೀವು 12 ಗಂಟೆ ಅಥವಾ ನೀವು 18 ಗಂಟೆಗಳನ್ನು ತೆಗೆದುಕೊಳ್ಳಬಹುದು. ರಾಜ್ಯಸಭೆಯಲ್ಲಿ ಸದನದ ನಾಯಕನಾಗಿ ವಿರೋಧ ಪಕ್ಷವು ನಿರ್ಧರಿಸುವಷ್ಟು ಗಂಟೆಗಳ ಕಾಲ ನಾವು ಚರ್ಚೆಗೆ ಸಿದ್ಧರಿದ್ದೇವೆ ಎಂದು ತಿಳಿಸಿದ್ದಾರೆ.