ಕೊಡಗು | ಶನಿವಾರಸಂತೆ ಸಮೀಪದ ಗ್ರಾಮದಲ್ಲಿ ಸಾಕು ನಾಯಿ ಹೊತ್ತೊಯ್ದ ಚಿರತೆ
ಮಡಿಕೇರಿ: ಕೊಡಗಿನ (Kodagu) ಶನಿವಾರಸಂತೆ ಸಮೀಪದ ಹೊಸಗುತ್ತಿ ಗ್ರಾಮದಲ್ಲಿ ಕಾಣಿಸಿಕೊಂಡ ಚಿರತೆ ಹೊಂಚು ಹಾಕಿ ಸಾಕು ನಾಯಿಯನ್ನು (Dog) ಹೊತ್ತೊಯ್ದಿರುವ ಘಟನೆ ನಡೆದಿದೆ. ಇಂದು (ಬುಧವಾರ) ಮಧ್ಯಾಹ್ನ 3 ಗಂಟೆ ಸ್ಥಳೀಯ ನಿವಾಸಿ ಅರುಣ್ ಎಂಬುವವರ ಮನೆಯ ಸಮೀಪ ಚಿರತೆ (Leopard) ಕಾಣಿಸಿಕೊಂಡಿದ್ದು, ಸಾಕು ನಾಯಿಯನ್ನು ಎಳೆದೊಯ್ದಿದೆ. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ

ಮಡಿಕೇರಿ: ಕೊಡಗಿನ (Kodagu) ಶನಿವಾರಸಂತೆ ಸಮೀಪದ ಹೊಸಗುತ್ತಿ ಗ್ರಾಮದಲ್ಲಿ ಕಾಣಿಸಿಕೊಂಡ ಚಿರತೆ ಹೊಂಚು ಹಾಕಿ ಸಾಕು ನಾಯಿಯನ್ನು (Dog) ಹೊತ್ತೊಯ್ದಿರುವ ಘಟನೆ ನಡೆದಿದೆ. ಇಂದು (ಬುಧವಾರ) ಮಧ್ಯಾಹ್ನ 3 ಗಂಟೆ ಸ್ಥಳೀಯ ನಿವಾಸಿ ಅರುಣ್ ಎಂಬುವವರ ಮನೆಯ ಸಮೀಪ ಚಿರತೆ (Leopard) ಕಾಣಿಸಿಕೊಂಡಿದ್ದು, ಸಾಕು ನಾಯಿಯನ್ನು ಎಳೆದೊಯ್ದಿದೆ. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ (CCTV Camera) ಸೆರೆಯಾಗಿದೆ. ಇದನ್ನೂ ಓದಿ: ಸಂಪುಟ ವಿಸ್ತರಣೆ ಇನ್ನೊಂದು ವಾರ ಮುಂದೂಡಿಕೆ – ಡಿಕೆಶಿಯಿಂದ 3 ಡಿಸಿಎಂ ಬ್ರಹ್ಮಾಸ್ತ್ರ..! ಆಲೂರು ಸಿದ್ಧಾಪುರ ವ್ಯಾಪ್ತಿಯ ಆಲೂರು, ಮಾಲಂಬಿ, ಹೊಸಗುತ್ತಿ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಚಿರತೆ ಒಡಾಟ ನಡೆಯುತ್ತಿದೆ. ರಾತ್ರಿ ವೇಳೆ ನಾಯಿಗಳು ಹಾಗೂ ದನದ ಕೊಟ್ಟಿಗೆಯಲ್ಲಿದ್ದ ಕರುಗಳನ್ನ ಹೊತ್ತೊಯ್ಯುತ್ತಿದ್ದ ಬಗ್ಗೆಯೂ ವರದಿಯಾಗುತ್ತಿದೆ. ಇದು ಸಹಜವಾಗಿಯೇ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದು, ಅರಣ್ಯ ಇಲಾಖೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಶಿವಾಜಿನಗರದಲ್ಲಿ ಜಿಬಿಎ ಅಧಿಕಾರಿಗಳ ಮೇಲೆ ಹಲ್ಲೆ ಕೇಸ್ – ಐವರು ಆರೋಪಿಗಳು ಪೊಲೀಸ್ ಕಸ್ಟಡಿಗೆ