ಪೊಲೀಸರು ಸಿಡಿಸಿದ್ದ ಅಶ್ರುವಾಯುನಿಂದ ಆರೋಗ್ಯದ ಮೇಲೆ ನೇರ ಪರಿಣಾಮ: ನಟಿ ಶಬಾನಾ
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧಿಸಿ ಜಂತರ್ ಮಂತರ್ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದಬ್ಬಾಳಿಕೆ ಖಂಡಿಸಿ ಬಾಲಿವುಡ್ ಹಿರಿಯ ನಟಿ ಶಬಾನಾ ಅಜ್ಮಿ ಬೇಸರ ಹೊರಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡ ಅವರು, ‘ವಿದ್ಯಾರ್ಥಿಗಳ ಗುಂಪನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿದರು. ವಿ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧಿಸಿ ಜಂತರ್ ಮಂತರ್ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದಬ್ಬಾಳಿಕೆ ಖಂಡಿಸಿ ಬಾಲಿವುಡ್ ಹಿರಿಯ ನಟಿ ಶಬಾನಾ ಅಜ್ಮಿ ಬೇಸರ ಹೊರಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡ ಅವರು, ‘ವಿದ್ಯಾರ್ಥಿಗಳ ಗುಂಪನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿದರು. ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿದರು. ಈ ಸಂದರ್ಭದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ‘ ಎಂದು ಶಬಾನಾ ಅಜ್ಮಿ ಅವರು ಹೇಳಿದ್ದಾರೆ.‘ಅಲ್ಲೆ ಪಕ್ಕದಲ್ಲಿ ಇದ್ದ ನನಗೂ ಪೊಲೀಸರು ಸಿಡಿಸಿದ್ದ ಅಶ್ರುವಾಯು ತಗುಲಿದೆ. ಇದರಿಂದ ನನಗಿರುವ ಅಸ್ತಮಾ ಸಮಸ್ಯೆ ಹೆಚ್ಚಾಗಿದೆ. ಘಟನೆ ಸಂಭವಿಸಿದ ಬಳಿಕ ಕೂಡಲೇ ನನ್ನನ್ನು ಪಕ್ಕದ ಕಟ್ಟಡಕ್ಕೆ ಕಳುಹಿಸಿದ್ದರು. ನಾನು ಸ್ವಲ್ಪ ಹೊತ್ತು ಚೇತರಿಸಿಕೊಂಡ ನಂತರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳನ್ನು ಮಾತನಾಡಿಸಿದೆ. ಘನಘೋರ ಘಟನೆ ಸಂಭವಿಸಿದ್ದರೂ ಯಾವುದೇ ವಿದ್ಯಾರ್ಥಿಗಳು ಕುಗ್ಗಿರಲಿಲ್ಲ ಅವರ ಧೈರ್ಯ ಎಲ್ಲರಿಗೂ ಸ್ಪೂರ್ತಿ‘ ಎಂದು ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ವಿವರಿಸಿದ್ದಾರೆ.ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿ ತನ್ನ ಪತಿ, ಹಿರಿಯ ಗೀತರಚನೆಕಾರ ಜಾವೇದ್ ಅಖ್ತರ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಆದರೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದಿದ್ದಾರೆ.